Advertisement
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಗರದ ಡಾ| ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿ ಶನಿವಾರ ನಡೆದ ಡಾ| ಬಾಬಾಸಾಹೇಬ ಅಂಬೇಡ್ಕರ ಅವರ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಜಿಪಂ ಸಿಇಒ ರಾಮಚಂದ್ರನ್ ಮಾತನಾಡಿ, ಪ್ರಜಾಪ್ರಭುತ್ವ ಯಶಸ್ಸಿಗೆ ಎಲ್ಲರೂ ಮೇ 12ರಂದು ಕಡ್ಡಾಯ ಮತದಾನ ಮಾಡುವ ಮೂಲಕ ಡಾ| ಅಂಬೇಡ್ಕರ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು. ಗೋಕಾಕ ತಾಲೂಕಿನ ಯಾದವಾಡ ಗ್ರಾಮದ ಜೆಎನ್ ಎಸ್ ಪಪೂ ಕಾಲೇಜಿನ ಉಪನ್ಯಾಸಕಿ ಪ್ರಭಾವತಿ ಕಣವಿ ಉಪನ್ಯಾಸ ನೀಡಿ, ಅಪಾರ ಜ್ಞಾನ ಹೊಂದಿದ್ದ ಡಾ| ಅಂಬೇಡ್ಕರ ಅವರು ನಡೆದಾಡುವ ವಿಶ್ವ ವಿದ್ಯಾಲಯವಾಗಿದ್ದರು. ಮನುಷ್ಯರನ್ನು ಮಾನವೀಯತೆಯ ನೆಲೆಗಟ್ಟಿನಲ್ಲಿ ನೋಡಬೇಕೆಂಬುದು ಅಂಬೇಡ್ಕರ ಅವರ ಹೋರಾಟದ ಪ್ರಮುಖ ಆಶಯವಾಗಿತ್ತು ಎಂದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್. ಮುನಿರಾಜು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿಯ ಐವರು ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಪಾಲಿಕೆ ಆಯುಕ್ತ ಕೃಷ್ಣಗೌಡ ತಾಯಣ್ಣವರ, ಪರಿಶಿಷ್ಟ ಪಂಗಡಗಳ ಜಿಲ್ಲಾ ಕಲ್ಯಾಣಾಧಿಕಾರಿ ಉಮಾ ಸಾಲಿಗೌಡರ ಇದ್ದರು.
ಅಂಬೇಡ್ಕರ್‌ಗೆ ಗಣ್ಯರ ನಮನಡಾ| ಅಂಬೇಡ್ಕರ ಉದ್ಯಾನವನದಲ್ಲಿ ಬೆಳಗ್ಗೆ ಜಿಲ್ಲಾಧಿಕಾರಿ ಜಿಯಾವುಲ್ಲಾ ಎಸ್. ಡಾ| ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬೆಳಗಾವಿ ಉತ್ತರ ವಲಯ ಐಜಿಪಿ ಅಲೋಕಕುಮಾರ, ನಗರ ಪೊಲೀಸ್ ಆಯುಕ್ತ ಡಾ| ಡಿ.ಸಿ. ರಾಜಪ್ಪ, ಡಿಸಿಪಿ ಸೀಮಾ ಲಾಟ್ಕರ, ಎಸ್‌ಪಿ ಸುಧಿಧೀರಕುಮಾರ ರೆಡ್ಡಿ, ಜಿಪಂ ಸಿಇಒ ರಾಮಚಂದ್ರನ್ ಆರ್., ಅಪರ ಜಿಲ್ಲಾ ಧಿಕಾರಿ ಎಚ್.ಬಿ. ಬೂದೆಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್. ಮುನಿರಾಜು ಸೇರಿದಂತೆ ಇತರರು ಇದ್ದರು. ನಂತರ ಜಿಲ್ಲಾ ಧಿಕಾರಿ ಜಿಯಾವುಲ್ಲಾ ಎಸ್. ಹಾಗೂ ಐಜಿಪಿ ಅಲೋಕ ಕುಮಾರ ಅವರು ಡಾ| ಬಿ.ಆರ್. ಅಂಬೇಡ್ಕರ್ ಅವರ ತೊಟ್ಟಿಲು ತೂಗಿ ತೊಟ್ಟಿಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಿಳೆಯರು ಪಾಲ್ಗೊಂಡಿದ್ದರು. ಗಮನ ಸೆಳೆದ ಮೆರವಣಿಗೆ
ನಗರದ ಧರ್ಮವೀರ ಸಂಭಾಜಿ ವೃತ್ತದಲ್ಲಿ ಜಿಲ್ಲಾಧಿಕಾರಿ ಜಿಯಾವುಲ್ಲಾ ಎಸ್. ಡಾ| ಬಾಬಾಸಾಹೇಬರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಡಾ| ಬಿ.ಆರ್. ಅಂಬೇಡ್ಕರ್ ಅವರ ಜೀವನ ಸಾಧನೆ ಸಾರುವ ರೂಪಕ ವಾಹನಗಳು ಗಮನ ಸೆಳೆದವು. ಜಾನಪದ ಕಲಾ ತಂಡಗಳ ಮೆರಗು ಗಮನ ಸಳೆಯಿತು. ಅಲಂಕೃತ ವಾಹನದಲ್ಲಿ ಡಾ| ಅಂಬೇಡ್ಕರ್ ನಿಂತ ಭಂಗಿಯ ಭಾವಚಿತ್ರ ಹಾಗೂ ಗೌತಮ ಬುದ್ಧ ಅವರ ಭಾವಚಿತ್ರ ಗಮನ ಸೆಳೆಯಿತು. ಧ್ವನಿವರ್ಧಕಗಳಿಂದ ಮೊಳಗುತ್ತಿದ್ದ ಗೀತೆಗಳಿಗೆ ಹೆಜ್ಜೆ ಹಾಕಿದರು.