Advertisement

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ; ಜಗಜೀವನರಾಂ ಕೊಡುಗೆ ಅಪಾರ

02:45 PM Apr 06, 2019 | Team Udayavani |

ಕಲಬುರಗಿ: ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನರಾಂ ತಮ್ಮ ಬದುಕಿನುದ್ದಕ್ಕೂ ಎಲ್ಲ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದ ಸ್ವಾತಂತ್ರ್ಯ ಭಾರತದ ಮಹಾನ್‌ ವ್ಯಕ್ತಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಹೇಳಿದರು.

Advertisement

ನಗರದ ಸಾರ್ವಜನಿಕ ಉದ್ಯಾನವನದ ಸಮೀಪದ ಡಾ| ಬಾಬು ಜಗಜೀವನರಾಮ, ಪುತ್ಥಳಿ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ,
ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ
ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂ ಅವರ 112ನೇ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಅಸ್ಪೃಶ್ಯತೆ ತೊಲಗಿಸಿ ಸಮಾನತೆ ತರಲೆಂದು ಬಾಬು ಜಗಜೀವನರಾಂ ಹೋರಾಟ ನಡೆಸಿದರು. ಜಾತಿ ವ್ಯವಸ್ಥೆ ಇಲ್ಲದೆ ಎಲ್ಲರಲ್ಲೂ ಸಮಾನತೆ ತರುವುದೇ ಅವರ ಮುಖ್ಯ ಉದ್ದೇಶವಾಗಿತ್ತು. ದೇಶದಲ್ಲಿ ಪ್ಯಾನ್‌ ಇಂಡಿಯಾ ಚಳವಳಿ ಪ್ರಾರಂಭಕ್ಕೆ ಕಾರಣೀಕರ್ತರಾಗಿದ್ದು ಬಾಬು ಜಗಜೀವನರಾಂ.
ಅದೇ ರೀತಿ ದೇಶದಲ್ಲಿ ಆಹಾರ ಸಮರ್ಪಕವಾಗಿ ಎಲ್ಲರಿಗೂ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು ಎಂದು ಸ್ಮರಿಸಿದರು.

ಕೃಷಿಯಲ್ಲಿ ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬನೆ ಗೊಳಿಸುವದಲ್ಲದೇ ದೇಶದಲ್ಲಿ ಆಹಾರ ಉತ್ಪಾದನೆ ಹೆಚ್ಚಿಸಿ ದೇಶವನ್ನು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾ
ಧಿಸುವಲ್ಲಿ ಬಾಬು ಜಗಜೀವನರಾಂ ಕೊಡುಗೆ ಅಪಾರವಾಗಿದೆ. ಅಭಿವೃದ್ದಿ ಹೊಂದುತ್ತಿರುವ ದೇಶಗಳ ಪಟ್ಟಿಯಲ್ಲಿ ಭಾರತವನ್ನು ತರುವಲ್ಲಿ ಅವರ ಪಾತ್ರ ಮಹತ್ವದಾಗಿದೆ ಎಂದು ಬಣ್ಣಿಸಿದರು.

ಸಾಮಾಜಿಕ ಸುಧಾರಣೆ, ಹಸಿರು ಕ್ರಾಂತಿ ಅಲ್ಲದೇ ಇನ್ನು ಹಲವಾರು ಕ್ಷೇತ್ರಗಳ ಅಭಿವೃದ್ಧಿಯಲ್ಲಿ ತಮ್ಮ ಛಾಪನ್ನು ಡಾ| ಬಾಬು ಜಗಜೀವನರಾಂ ಮೂಡಿಸಿದ್ದಾರೆ. ತಮ್ಮ ಜೀವನದಾದ್ಯಂತ ಯಾವ ಉದ್ದೇಶಕ್ಕಾಗಿ ಹೋರಾಡಿದರೋ ಆ ಉದ್ದೇಶ ಈಡೇರಿಸುವ
ಹಾಗೆ ಎಲ್ಲರೂ ಅವರ ತತ್ವಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಬಾಬು ಜಗಜೀವನರಾಂ ಅವರ ಪುತ್ಥಳಿಗೆ ಜಿಲ್ಲಾಧಿ ಕಾರಿ ವೆಂಕಟೇಶಕುಮಾರ ಮಾಲಾರ್ಪಣೆ ಮಾಡಿದರು. ಎಸ್‌ಪಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌, ಜಿಪಂ ಸಿಇಒ ಡಾ| ರಾಜಾ ಪಿ., ಮಹಾನಗರ ಪಾಲಿಕೆ ಆಯುಕ್ತೆ ಫೌಜೀಯಾ ತರನ್ನುಮ್‌, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಸಮಾಜ
ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್‌. ಸತೀಶ, ಮುಖಂಡರಾದ ಶಾಮ ನಾಟಿಕಾರ, ರಾಜು ವಾಡೇಕರ, ಚಂದ್ರಿಕಾ ಪರಮೇಶ್ವರ ಮತ್ತಿತರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next