Advertisement

ಡಾ.ಬೇಟಗೇರಿ ಕೃಷ್ಣಶರ್ಮ ಕಾವ್ಯ, ಕಥಾ ಮತ್ತು ಕಾದಂಬರಿ ಪ್ರಶಸ್ತಿ ಪ್ರದಾನ

02:58 PM Sep 26, 2021 | Team Udayavani |

ಧಾರವಾಡ : ಬೆಳಗಾವಿಯ ಡಾ. ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್ ವತಿಯಿಂದ 2020-21ನೇ ಸಾಲಿನ ಡಾ.ಬೆಟಗೇರಿ ಕೃಷ್ಣಶರ್ಮ ಕಾವ್ಯ, ಕಥೆ  ಮತ್ತು ಕಾದಂಬರಿ ಪ್ರಶಸ್ತಿಗಳ ಪ್ರದಾನ ಸಮಾರಂಭವು ನಗರದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ರಾಷ್ಟ್ರೀಯ ಸ್ಮಾರಕ ಭವನದಲ್ಲಿ ರವಿವಾರ ಜರುಗಿತು.

Advertisement

ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಅವರಿಗೆ ಡಾ.ಬೆಟಗೇರಿ ಕೃಷ್ಣಶರ್ಮ ಕಾವ್ಯ ಪ್ರಶಸ್ತಿ, ಡಾ.ಕುಂ.ವೀರಭದ್ರಪ್ಪ ಅವರಿಗೆ ಡಾ.ಬೆಟಗೇರಿ ಕೃಷ್ಣಶರ್ಮ ಕಾದಂಬರಿ ಪ್ರಶಸ್ತಿ ಹಾಗೂ ವೈದೇಹಿ ಅವರಿಗೆ ಡಾ.ಬೆಟಗೇರಿ ಕೃಷ್ಣಶರ್ಮ ಕಥಾ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಯು ತಲಾ 50 ಸಾವಿರ ನಗದು ಹಾಗೂ ಪ್ರಶಸ್ತಿ ಪ್ರಮಾಣ ಪತ್ರವನ್ನು ಒಳಗೊಂಡಿದೆ.

ಹಿರಿಯ ಲೇಖಕ ಡಾ.ಗುರುಲಿಂಗ ಕಾಪಸೆ ಅವರು, ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಡಾ.ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್ ಅಧ್ಯಕ್ಷ ರಾಘವೇಂದ್ರ ಪಾಟೀಲ, ಟ್ರಸ್ಟನ ಸದಸ್ಯ ಕಾರ್ಯದರ್ಶಿ ವಿದ್ಯಾವತಿ ಭಜಂತ್ರಿ, ಡಾ.ಸಿ.ಕೆ. ನಾವಲಗಿ ಸೇರಿದಂತೆ ಹಲವರು‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next