ಕಾಸರಗೋಡು: ಕರ್ನಾಟಕ ಸರಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಸಿ. ಸೋಮಶೇಖರ ಅವರು ಕಾಸರಗೋಡಿನ ಯಕ್ಷಪುತ್ಥಳಿ ಬೊಂಬೆ ಮನೆಗೆ ಬುಧವಾರ ಮಧ್ಯಾಹ್ನ ಭೇಟಿ ನೀಡಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆದ ಪಿಲಿಕುಂಜೆಯಲ್ಲಿರುವ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ನೇತೃತ್ವದಲ್ಲಿ ಯಕ್ಷಗಾನ ಬೊಂಬೆಯಾಟ ಮ್ಯೂಸಿಯಂ ನಿರ್ಮಾಣವಾಗುತ್ತಿದೆ. ಸಂಘದ ಸಾಧನೆಯನ್ನು ಶ್ಲಾಘಿಸಿದ ಅಧ್ಯಕ್ಷರು ನಿರ್ಮಾಣವಾಗುತ್ತಿರುವ ಯಕ್ಷಪುತ್ಥಳಿಗಳನ್ನು ನೋಡಿ ಹರ್ಷ ವ್ಯಕ್ತಪಡಿಸಿದರು.
ಕೊಂಡೆವೂರಿಗೆ ಭೇಟಿ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮಕ್ಕೆ ಭೇಟಿ ನೀಡಿದ ಡಾ| ಸಿ. ಸೋಮಶೇಖರ ಅವರು ಕೊಂಡೆವೂರಿನ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಆ ಬಳಿಕ ಕೊಂಡೆವೂರಿನ ಶಾಲೆಗೆ ಭೇಟಿ ನೀಡಿ ನಿರ್ವಹಣೆಯನ್ನು ವೀಕ್ಷಿಸಿದರು.