Advertisement

ಡಾ|ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಅಭಿನಂದನೆ 

11:01 AM Oct 27, 2017 | Team Udayavani |

ಮುಂಬಯಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಅಂಗವಾಗಿ  ಅ. 24 ರಂದು ಧರ್ಮಸ್ಥಳದಲ್ಲಿ ಅದ್ದೂರಿ ಸಮಾರಂಭ ನಡೆಯಿತು.

Advertisement

ಸಮಾರಂಭದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ಏಕೈಕ ಸರಕಾರೇತರ ಸಂಸ್ಥೆಯಾಗಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಂಬಯಿ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಗೌರವಿಸಿ ಅಭಿನಂದಿಸಲಾಯಿತು.

ಸಮಾರಂಭದ ವೇದಿಕೆಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಂಬಯಿ ಸಂಸ್ಥಾಪಕಾಧ್ಯಕ್ಷ ತೋನ್ಸೆ ಜಯಕೃಷ್ಣ ಎ. ಶೆಟ್ಟಿ, ಸಮಿತಿಯ ಅಧ್ಯಕ್ಷ ಧರ್ಮಪಾಲ ಯು. ದೇವಾಡಿಗ, ಕರ್ನಾಟಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ. ಪಿ. ಜಗದೀಶ್‌ ಅಧಿಕಾರಿ, ಶಶಿಧರ ಶೆಟ್ಟಿ ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next