ಬೆಳ್ತಂಗಡಿ : ಭೌತಿಕ ಸಂಪತ್ತಿನ ಸಂಗ್ರಹ ಜೀವನದ ಗುರಿ ಅಲ್ಲ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಏಕಾಗ್ರತೆಯೊಂದಿಗೆ ಅವರವರ ಕಾರ್ಯಕ್ಷೇತ್ರದಲ್ಲಿ ಸಾಧನೆಯ ಶಿಖರವೇರಲು ಯೋಗಾಭ್ಯಾಸ ಸಹಕಾರಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಸಲಹೆ ನೀಡಿದರು.
7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸೋಮವಾರ ವೆಬಿನಾರ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
“ಮನೆ ಮನೆಯಲ್ಲಿ ಯೋಗಾಭ್ಯಾಸ’ ಎಂಬುದು ಈ ವರ್ಷದ ಸಂದೇಶ. ಈ ಮೂಲಕ ಆರೋಗ್ಯಭಾಗ್ಯ, ದೀರ್ಘಾ ಯುಷ್ಯಕ್ಕಾಗಿ ಪ್ರತೀ ಮನೆಯಲ್ಲಿ ಸದಸ್ಯ ರೆಲ್ಲ ಸೇರಿ ನಿತ್ಯವೂ ಯೋಗಾಭ್ಯಾಸ ಮಾಡಬೇಕು ಎಂದು ಕರೆಯಿತ್ತರು.
ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚು ವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಪ್ರಭಾರ ಉಪ ಕುಲಪತಿ ಡಾ| ಜಯಕರ ಅವರು ಉಪಸ್ಥಿತರಿದ್ದರು.
ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ| ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಯೋಗ ವಿಭಾಗದ ಡೀನ್ ಡಾ| ಶಿವಪ್ರಸಾದ ಶೆಟ್ಟಿ ವಂದಿಸಿದರು. ಡಾ| ಜ್ಯೋಸ್ನಾ ಮತ್ತು ಡಾ| ಮಂಜುಶ್ರೀ ಕಾರ್ಯಕ್ರಮ ನಿರ್ವಹಿಸಿದರು.
ಬೆಂಗಳೂರಿನಲ್ಲಿ ಯೋಗ,ಪ್ರಕೃತಿ ಚಿಕಿತ್ಸಾ ಕೇಂದ್ರ
ಧರ್ಮಸ್ಥಳದ ಶಾಂತಿವನದಲ್ಲಿ ಮತ್ತು ಮಣಿಪಾಲ ಬಳಿಯ ಪರೀಕದಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರವಿದ್ದು ಬೆಂಗಳೂರಿನ ನೆಲಮಂಗಲದಲ್ಲಿ 300 ಹಾಸಿಗೆಗಳ ಸಾಮರ್ಥ್ಯದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರ ಸದ್ಯದಲ್ಲಿಯೇ ಪ್ರಾರಂಭಗೊಳ್ಳಲಿದೆ.
– ಡಾ| ಡಿ. ವೀರೇಂದ್ರ ಹೆಗ್ಗಡೆ, ಧರ್ಮಾಧಿಕಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ