Advertisement

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

03:30 PM Apr 26, 2024 | Team Udayavani |

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶುಕ್ರವಾರ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮತ್ತು ಪತ್ನಿ ಹೇಮಾವತಿ ವೀ. ಹೆಗ್ಗಡೆ 164 ನೇ ಯಕ್ಷಗಾನ ಮತಗಟ್ಟೆ ಎಸ್.ಡಿ.ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು.

Advertisement

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೆ ಪ್ರಭುಗಳಾಗಿದ್ದು ಅರ್ಹ ಹಾಗೂ ದಕ್ಷ ನಾಯಕರನ್ನು ಆಯ್ಕೆ ಮಾಡುವುದು ಪ್ರಜೆಗಳ ಹಕ್ಕು ಮತ್ತು ಕರ್ತವ್ಯವೂ ಆಗಿದೆ. ಮತದಾನದ ಮೂಲಕ ಆದರ್ಶ ನಾಯಕರು ಆಯ್ಕೆಯಾಗಲಿ ಎಂದು ಹೆಗ್ಗಡೆಯವರು ಹಾರೈಸಿದರು. ಜತೆಗೆ ನಾನು 10 ನೇ ಬಾರಿಗೆ ಲೋಕಸಭಾ ಚುನಾವಣೆಗೆ ಮತ ಚಲಾಯಿಸುತ್ತಿರುವುದಾಗಿಯೂ ತಿಳಿಸಿದರು.

ಹೆಗ್ಗಡೆಯವರ ಸಹೋದರ ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಕೂಡಾ ಅದೇ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಇದನ್ನೂ ಓದಿ: ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Advertisement

Udayavani is now on Telegram. Click here to join our channel and stay updated with the latest news.

Next