Advertisement
ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಉದ್ದಿಮೆದಾರರ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿ, ಇಂದು ಸರಕಾರ ಮತ್ತು ಸಮಾಜದಿಂದ ಸಿಗುವ ಅವಕಾಶಗಳು, ಶಿಕ್ಷಣ ಹಾಗೂ ಸಾಲ ಸೌಲಭ್ಯದ ಸದುಪಯೋಗ ಪಡೆದು ಮಹಿಳೆಯರು ಸ್ವಾವಲಂಬಿಗಳಾಗಿ ಉತ್ತಮ ವ್ಯವಹಾರದೊಂದಿಗೆ ಯಶಸ್ವಿ ಉದ್ಯಮಿಗಳಾಗಿ ಮಿಂಚುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಡಾ| ಹೇಮಾವತಿ ವೀ.ಹೆಗ್ಗಡೆ, ಸಿಡ್ಬಿಯ ಮುಖ್ಯ ಮಹಾಪ್ರಬಂಧಕ ರವಿತ್ಯಾಗಿ ಮತ್ತು ಉಪಮಹಾಪ್ರಬಂಧಕ ನಿತಿನ್ ಶುಕ್ಲಾ ಉಪಸ್ಥಿತರಿದ್ದರು.
Related Articles
ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ| ಎಲ್. ಎಚ್. ಮಂಜುನಾಥ್ ಸ್ವಾಗತಿಸಿದರು. ಶಿವಾನಂದ ಆಚಾರ್ಯ ವಂದಿಸಿದರು. ಪೂಜಾ ಪಕ್ಕಳ ನಿರ್ವಹಿಸಿದರು.
Advertisement
1000 ಕೋಟಿ ರೂ. ಸಾಲ ಮಂಜೂರಾತಿ ಪತ್ರ ಹಸ್ತಾಂತರಅಮೃತ ಜೀವನ ಪ್ರಯಾಸ್ ಚಿಂತನ ಕೃತಿ ಬಿಡುಗಡೆಗೊಳಿಸಿದ ಸಿಡ್ಬಿ ಅಧ್ಯಕ್ಷ ಶಿವ ಸುಬ್ರಹಮಣ್ಯ ರಾಮನ್ 1000 ಕೋಟಿ ರೂ. ಸಾಲ ಮಂಜೂರಾತಿ ಪತ್ರವನ್ನು ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್.ಮಂಜುನಾಥರಿಗೆ ನೀಡಿದರು.