Advertisement

ಕಾಮನ್‌ ಸರ್ವಿಸ್‌ ಸೆಂಟರ್‌ 10 ಸಾವಿರಕ್ಕೆ ಏರಿಸುವ ಗುರಿ : ಡಾ|ವೀರೇಂದ್ರ ಹೆಗ್ಗಡೆ

08:50 AM Aug 14, 2022 | Team Udayavani |

ಮಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ಕಾಮನ್‌ ಸರ್ವಿಸ್‌ ಸೆಂಟರ್‌ಗಳನ್ನು (ಸಿಎಸ್‌ಸಿ) 10 ಸಾವಿರಕ್ಕೆ ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದು ರಾಜ್ಯಸಭಾಸದಸ್ಯರಾಗಿರುವ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ 6 ಸಾವಿರ ಸಿಎಸ್‌ಸಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳ ಮೂಲಕ ಸರಕಾರದ ಜನೋಪಯೋಗಿ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಿ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.

ಸರಕಾರದಲ್ಲಿ 500ಕ್ಕೂ ಅಧಿಕ ಜನೋಪಯೋಗಿ ಯೋಜನೆಗಳಿವೆ.ಮಾಹಿತಿ ಕೊರತೆಯಿಂದ ಸರಿಯಾಗಿ ತಲುಪುತ್ತಿಲ್ಲ. ಸಿಎಸ್‌ಸಿ ಮೂಲಕ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಗುತ್ತದೆ ಎಂದರು.

ಕೇಂದ್ರ ಸರಕಾರದ ಅಧಿಕಾರಿಗಳು ಸಿಎಸ್‌ಸಿಗೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಇದರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ಮಾದರಿಯಲ್ಲಿ ದೇಶದಲ್ಲಿ ಗ್ರಾ.ಪಂ. ಮಟ್ಟದಲ್ಲಿ ಸಿಎಸ್‌ಸಿ ತೆರೆಯುವ ಬಗ್ಗೆ ಕೇಂದ್ರ ಸರಕಾರದಲ್ಲಿ ಚಿಂತನೆ ನಡೆಯುತ್ತಿದೆ ಎಂದರು. ಸ್ವ ಉದ್ಯೋಗ ತರಬೇತಿ ಕೇಂದ್ರದಡಿಯಲ್ಲಿ ಇದು ದೇಶದ 590 ಜಿಲ್ಲೆಗಳಲ್ಲಿ ಕೇಂದ್ರಗಳು ಕಾರ್ಯಾಚರಿಸುತ್ತಿವೆ ಎಂದು ಹೇಳಿದರು.

ಶಿರಾಡಿ ರಸ್ತೆ: ಸಚಿವರ ಭೇಟಿ
ರಾಜಧಾನಿ ಬೆಂಗಳೂರು ಮತ್ತು ಕರಾವಳಿಯನ್ನು ಬೆಸೆಯುವ ರಾ.ಹೆ.75 ರಲ್ಲಿ ಶಿರಾಡಿ ಘಾಟಿ ರಸ್ತೆ ಸ್ಥಿತಿ ಸುಧಾರಣೆಗೆ ಶಾಶ್ವತ ಪರಿಹಾರದ ಬಗ್ಗೆ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಜತೆ ಕಳೆದ ಶನಿವಾರ ಹೊಸದಿಲ್ಲಿಯಲ್ಲಿ ಭೇಟಿಯಾಗಿ ಗಮನಕ್ಕೆ ತಂದಿದ್ದೇನೆ. ಅರಣ್ಯಕ್ಕೆ ಸಂಬಂಧಿಸಿ ಕೆಲವು ಸಮಸ್ಯೆಗಳಿರುವುದರಿಂದ ಕಾಮಗಾರಿ ವಿಳಂಬವಾಗುತ್ತಿದೆ ಎಂದವರು ತಿಳಿಸಿದ್ದಾರೆ ಎಂದು ಡಾ| ಹೆಗ್ಗಡೆಯವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

Advertisement

ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ಬಗ್ಗೆ ರಾಜ್ಯಸಭಾ ಸದಸ್ಯನಾಗಿ ನನ್ನ ಪ್ರಯತ್ನವನ್ನು ಮುಂದವರಿಸುತ್ತೇನೆ.ಇದರಲ್ಲಿ ಕೆಲವು ತಾಂತ್ರಿಕ ತೊಡಕುಗಳಿವೆ. ಇದನ್ನು ನಿವಾರಿಸಿಕೊಂಡು ಮುನ್ನಡೆಯಬೇಕಾಗಿದೆ ಎಂದರು.

ಇದನ್ನೂ ಓದಿ : ರಾಷ್ಟ್ರೀಯ ಲೋಕ್‌ ಅದಾಲತ್‌ : ದ.ಕ 30,729, ಉಡುಪಿಯಲ್ಲಿ 20,444 ಪ್ರಕರಣ ಇತ್ಯರ್ಥ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next