ಬೆಂಗಳೂರು: ನಗರದ ಖ್ಯಾತ ಪ್ರಸೂತಿ ತಜ್ಞೆ ಡಾ. ಗೀತಾ ಮುರಳೀಧರ ಅವರು ನಿಧನರಾಗಿದ್ದಾರೆ.
71 ವರ್ಷ ವಯಸ್ಸಿನ ಡಾ. ಗೀತಾ ಮುರಳೀಧರ ಅನಾರೋಗ್ಯದಿಂದ ಕಳೆದ ಹದಿನೈದು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಸಾಗರ ಚಂದ್ರಮ್ಮ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಪ್ರಸೂತಿ ಮತ್ತು ಸ್ತ್ರೀರೋಗ ವಿಷಯಗಳಲ್ಲಿ ಎಂ ಡಿ ಪದವಿ ಪಡೆದಿದ್ದ ಡಾ. ಗೀತಾ ಮುರಳೀಧರ, ಕೆ ಜಿ ಎಫ್ ನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಆರಂಭಿಸಿ, ಬೆಂಗಳೂರಿನ ನಿಮ್ಹಾನ್ಸ್, ಬೇಲೂರು ಮತ್ತು ಚನ್ನರಾಯಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿದರು.
ಬೆಂಗಳೂರು ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ ನಂತರ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯ ಸೇವೆಗಾಗಿ ಮಸ್ಕತ್ ಗೆ ತೆರಳಿದರು.ಮಸ್ಕತ್ ನಲ್ಲಿದ್ದಾಗ ಅಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಕೂಡ ಸೇವೆ ಸಲ್ಲಿಸಿದರು.ಬೆಂಗಳೂರಿನ ಸಾಗರ್ ಚಂದ್ರಮ್ಮ ಆಸ್ಪತ್ರೆಯಲ್ಲಿ ಅವರು ಇತ್ತೀಚೆಗಿನವರೆಗೂ ಸೇವೆ ಸಲ್ಲಿಸುತ್ತಿದ್ದರು.
ಇದನ್ನೂ ಓದಿ:“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ
ಮೃತರು ಪತಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು- ಮಿತ್ರರನ್ನು ಅಗಲಿದ್ದಾರೆ. ಒಬ್ಬ ಮಗ ಅಮೇರಿಕಾದಿಂದ ಬರಬೇಕಿರುವುದರಿಂದ ಗುರುವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.