Advertisement

Mangaluru: ಕೆಎಂಸಿ ಆಸ್ಪತ್ರೆಯ ಖ್ಯಾತ ಮೂತ್ರಶಾಸ್ತ್ರಜ್ಞ ಡಾ.ಜಿ.ಜಿ. ಲಕ್ಷ್ಮಣ ಪ್ರಭು ನಿಧನ

10:34 AM Nov 17, 2023 | Team Udayavani |

ಮಂಗಳೂರು: ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಖ್ಯಾತ ಮೂತ್ರಶಾಸ್ತ್ರಜ್ಞ ಡಾ.ಜಿ.ಜಿ.ಲಕ್ಷ್ಮಣ ಪ್ರಭು ಅವರು ಇಂದು ನಿಧನ ಹೊಂದಿದರು. ಅವರಿಗೆ 61 ವರ್ಷ ವಯಸ್ಸಾಗಿತ್ತು.

Advertisement

ಲಕ್ಷ್ಮಣ ಪ್ರಭು ಅವರು ವಾರದ ಹಿಂದೆ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು ಆ ಬಳಿಕ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Assembly Elections: ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಇಂದು ಚುನಾವಣೆ… ಮತದಾನ ಆರಂಭ

36 ವರ್ಷಗಳ ಅಗಾಧ ಅನುಭವವನ್ನು ಹೊಂದಿರುವ ಅವರು ತಮ್ಮ ಪರಿಣತಿಯನ್ನು ಕೆಎಂಸಿ ಆಸ್ಪತ್ರೆಗೆ ಮಂಗಳೂರಿಗೆ ಅರ್ಪಿಸಿದ್ದಾರೆ.

ಹಲವಾರು ಸಂಕೀರ್ಣ ವೈದ್ಯಕೀಯ ಪ್ರಕರಣಗಳನ್ನು ನಿರ್ವಹಿಸಿದ್ದ ಅವರು, ಯುರೊಲಿಥಿಯಾಸಿಸ್, ಆಂಡ್ರಾಲಜಿ, ಯುರೊಡೈನಾಮಿಕ್ಸ್, ರೆಕಾನ್-ಯೂರಾಲಜಿ, ಯುರೊಜಿನೆಕಾಲಜಿ ಮತ್ತು ಎಂಡೋರಾಲಜಿಯಲ್ಲಿ ಪರಿಣತಿಯನ್ನು ಹೊಂದಿದ್ದರು.

Advertisement

ಎಂಬಿಬಿಎಸ್, MS ಜನರಲ್ ಸರ್ಜರಿ, MCH ಜೆನಿಟೂರ್ನರಿ ಸರ್ಜರಿ, DNB ಮೂತ್ರಶಾಸ್ತ್ರದಲ್ಲಿ ಪದವಿಗಳನ್ನು ಹೊಂದಿರುವ ಡಾ. ಪ್ರಭು, 2022 ರಲ್ಲಿ ಭಾರತೀಯ ಮೂತ್ರಾಂಗ ರೋಗ ಚಿಕಿತ್ಸಾ ತಜ್ಞರ ಸಂಘದ ಕಾರ್ಯದರ್ಶಿಯಾಗಿ ಆಯ್ಕೆಗೊಂಡಿದ್ದರು. ಭಾರತೀಯ ವೈದ್ಯಕೀಯ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next