Advertisement
ಸುದ್ದಿಗಾರರೋಂದಿಗೆ ಮಾತನಾಡಿದ ಅವರು ಇತ್ತೀಚೆಗೆ ಕೆಲ ಸುದ್ದಿ ವಾಹಿನಿಗಳಲ್ಲಿ ಕೊರಟಗೆರೆ ಕ್ಷೇತ್ರದ ಶಾಸಕರು ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರರವರು ಮುಂದಿನ 2023 ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರು ಪುಲಿಕೇಶಿ ನಗರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುತಾರೆ ಎಂಬ ಊಹಾಪೋಹಗಳ ಸುಳ್ಳು ಸುದ್ದಿಗಳು ಪ್ರಸಾರವಾಗುತ್ತಿದೆ. ಈ ಸುದ್ದಿ ಸತ್ಯಕ್ಕೆ ದೂರವಾಗಿದ್ದು ಡಾ.ಜಿ.ಪರಮೇಶ್ವರ್ ರವರು ಕಳೆದ ಜನವರಿ 25 ರಿಂದ ಕೋವಿಡ್ ನಿಂದ ಚಿಕಿತ್ಸೆ ಪಡೆಯುತ್ತಾ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ, ಅವರು ಯಾರೊಬ್ಬ ರಾಜಕೀಯ ವ್ಯಕ್ತಿಗಳನ್ನಾಗಲಿ ಸಾರ್ವಜನಿಕರನ್ನಾಗಲಿ ಭೇಟಿ ಮಾಡಿಲ್ಲ, ಆದರೆ ಸುದ್ದಿವಾಹಿನಿಗಳಲ್ಲಿ ಬೇರೆ ತರಹದ ಸುಳ್ಳು ಸುದ್ದಿಗಳು ಪ್ರಸಾರವಾಗುತ್ತಿರುವುದು ವಿಷಾದನೀಯವಾಗಿದ್ದು ಪಕ್ಷದ ಮುಖಂಡರು, ಕಾರ್ಯಕರ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
Related Articles
Advertisement
ಕ್ಷೇತ್ರದಲ್ಲಿ ನಡೆದಿರುವ ಹಾಗೂ ನಡೆಯುತ್ತಿರುವ ಅಭಿವೃದ್ದಿ ಕೆಲಸಗಳನ್ನು ಹಾಗೂ ಜನಪ್ರಿಯತೆಯನ್ನು ಸಹಿಸದ ವಿರೋಧಿಗಳು ಸುಳ್ಳು ಸುದ್ದಿಗಳನ್ನು ಹರಿಸುತ್ತಿದ್ದಾರೆ. ಈ ಬಗ್ಗೆ ಕ್ಷೇತ್ರದ ಜನತೆ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಡಾ.ಜಿ.ಪರಮೇಶ್ವರ್ ರವರು ಕೊರಟಗೆರೆ ಕ್ಷೇತ್ರ ಹಾಗೂ ತುಮಕೂರು ಜಿಲ್ಲೆಯನ್ನು ಜನ್ಮಭೂಮಿಯೆಂದು ಭಾವಿಸಿದ್ದು, ಅವರ ಸೇವೆ ತುಮಕೂರು ಜಿಲ್ಲೆ ಹಾಗೂ ಕೊರಟಗೆರೆ ಕ್ಷೇತ್ರಕ್ಕೆ ಮೀಸಲಾಗಿದೆ ಎಂದು ತಿಳಿಸಿದರು.