Advertisement

Karnataka Election: ಡಾ.ಜಿ.ಪರಮೇಶ್ವರ್ ನಾಮಪತ್ರ ಸಲ್ಲಿಕೆ

02:06 PM Apr 19, 2023 | Team Udayavani |

ತುಮಕೂರು: ಮಾಜಿ ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್  ಕೊರಟಗೆರೆ ವಿಧಾನ ಸಭಾ ಕ್ಷೇತ್ರದಿಂದ ಬುಧವಾರ ನಾಮಪತ್ರ ಸಲ್ಲಿಸಿದರು.

Advertisement

ಅಪಾರ ಬೆಂಬಲಿಗರೊಂದಿಗೆ ಪಟ್ಟಣದಲ್ಲಿ ಮೆರವಣಿಗೆ ಮಾಡಿ ನಂತರ ತಾಲ್ಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಇಂದು ನಾಮಪತ್ರ ಸಲ್ಲಿಸಿದ್ದೇನೆ ಎಂದರು.

ಕಾನೂನಿನ ಚೌಕಟ್ಟಿನಲ್ಲಿ, ಸಂವಿಧಾನ ಚೌಕಟ್ಟಿನಲ್ಲಿ ಚುನಾವಣೆ ನಡೆಸಲು ಒಪ್ಪಿಕೊಂಡಿದ್ದೇವೆ. ಅದರನ್ವಯ ನಾನು ಇಂದು ನಾಮಪತ್ರ ಸಲ್ಲಿಸಿದ್ದೇನೆ. ಈ ಚುನಾವಣೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎನ್ನುವ ಆತ್ಮವಿಶ್ವಾಸದಿಂದ ನಾಮಪತ್ರ ಸಲ್ಲಿಸಿದ್ದೇನೆ‌ ಎಂದು ನುಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಎಲ್ಲಾ ಸೂಚನೆ ಇದೆ. ಮತದಾರರಿಗೆ ಮನವಿ ಮಾಡ್ತೀವಿ ಮೇ 10 ರಂದು ನನಗೆ ಮತಕೊಡಿ ಎಂದು ಕೊರಟಗೆರೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದೇನೆ ಎಂದು ಹೇಳಿದರು.

Advertisement

ಕೊರಟಗೆರೆಯಿಂದ ಇಂದು ನಾಮಪತ್ರ ಸಲ್ಲಿಸಿದ್ದು ಇದು ಐತಿಹಾಸಿಕ ದಿನ ಆಗಲಿ ಎಂದು ಅಭಿಮಾನಿಗಳು ಬಯಸೋದು ಸ್ವಾಭಾವಿಕ.

ನಾನು ಉನ್ನತ ಹುದ್ದೇಗೆ ಏರಲಿ ಎಂದು ಅಭಿಮಾನಿಗಳು ಆಸೆ ಇಟ್ಟುಕೊಂಡಿರುತ್ತಾರೆ ಅದು ಅಹಜ ಹೊಸದೇನಲ್ಲ.
ಈ ಕ್ಷೇತ್ರದಿಂದ ನಾನು ಗೆಲ್ಲುತ್ತೇನೆ ಎಂಬ ಅಚಲ ವಿಶ್ವಾಸ ಇದೆ ಎಂದರು.

ಕಾಂಗ್ರೆಸ್ ಗೆ ವಲಸೆ ಬರೋರ ಸಂಖ್ಯೆ ಹೆಚ್ಚಾಗಿರೋದು ಶುಭ ಸೂಚನೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅನ್ನೋ ಸೂಚನೆ ಇರೋದರಿಂದ ಬರ್ತಾ ಇದ್ದಾರೆ.

ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಅಂತಹ ಹಿರಿಯ ನಾಯಕರು ಬಂದಿರೋದು ಪಕ್ಷ ಅಧಿಕಾರಕ್ಕೆ ಬರುತ್ತೆ ಅನ್ನೋ ಮುನ್ಸೂಚನೆ. ಇನ್ನೂ ಕೂಡ ತುಂಬಾ ಜನ ಕಾಂಗ್ರೆಸ್ ಗೆ ಬರುವವರಿದ್ದಾರೆ.

ರಾಮದಾಸ್ ಕೂಡಾ ಬಿಜೆಪಿ ತೊರೆದು ಕಾಂಗ್ರೆಸ್ ಬಂದರೆ ಆಶ್ಚರ್ಯ ಪಡಬೇಕಂತಿಲ್ಲ ಎಂದು ನುಡಿದರು.

ತುಮಕೂರು ಜಿಲ್ಲೆಯ ಬೇರೆ ಬೇರೆ ಪಕ್ಷದ ಮುಖಂಡರು ನನ್ನ ಸಂಪರ್ಕದಲ್ಲಿ ಇದ್ದಾರೆ. ಸಿದ್ದರಾಮಯ್ಯ ಅವರು ಕೂಡಾ ಕೊರಟಗೆರೆ ಕ್ಷೇತ್ರದ ಪ್ರಚಾರಕ್ಕೆ ಬರ್ತಾರೆ. ಈಗ ತಾನೇ ಅವರಿಗೆ ಪೋನ್ ನಲ್ಲು ಮಾತನಾಡಿ ಶುಭ ಹಾರೈಸಿದ್ದೇನೆ, ಅವರು ಕೂಡಾ ನನಗೆ ಶುಭವಾಗಲಿ ಎಂದು ಹೇಳಿದ್ದಾರೆ.

ದಲಿತ ಸಿಎಂ ಕುರಿತು ನಾನು ಪ್ರತಿಕ್ರಿಯೆ ಮಾಡಲು ಹೋಗಲ್ಲ. ನಮಗೆ ಬೇಕಾಗಿರೋದು ಕಾಂಗ್ರೇಸ್ ಅಧಿಕಾರಕ್ಕೆ ಬರೋದು ಎಂದರು. ಅದರ ಬಗ್ಗೆ ಟಿಪ್ಪಣಿ ಮಾಡೋದು ನನಗೆ ಇಷ್ಟ ಇಲ್ಲ. ಸಿಎಂ ಕಾಂಗ್ರೆಸ್ ಮುಳುಗುವ ಹಡಗು ಹೇಳಿಕೆ ವಿಚಾರ ವಾಗಿ ಪ್ರತಿಕ್ರಿಯಿಸಿದ ಅವರೇ ಹೇಳಿದ ಹಾಗೇ ಯಾರು ಮುಳುಗುತ್ತಾರೆ 13 ನೇ ತಾರೀಕಿನಂದು ಗೊತ್ತಾಗುತ್ತೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next