Advertisement

ಬಿಜೆಪಿಯವರನ್ನು ಕೇಳಿಕೊಂಡು ಅಧಿಕಾರ ಮಾಡಲು ಆಗುವುದಿಲ್ಲ: ಡಾ.ಜಿ.ಪರಮೇಶ್ವರ್

02:55 PM Jun 17, 2023 | Team Udayavani |

ಬೆಂಗಳೂರು: ಬಿಜೆಪಿಯವರು ಈಗ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಮಾತನ್ನಾಡುತ್ತಿದ್ದಾರೆ. ದೇಶದ ಆಡಳಿತ ವ್ಯವಸ್ಥೆಯಲ್ಲಿ ಸಂವಿಧಾನವೇ ಭಗವದ್ಗೀತೆ, ಬೈಬಲ್, ಕುರಾನ್. ಸಂವಿಧಾನ ಭಾರತೀಯರಿಗೆ ಗ್ರಂಥ ಇದ್ದಂತೆ. ಕಲಂ 25ರಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಗೂ ಧರ್ಮ ಆಯ್ಕೆಯ ಹಕ್ಕು ನೀಡಿದೆ. ಅದಕ್ಕೆ ವಿರುದ್ಧವಾಗಿ ಬಿಜೆಪಿಯವರು ಮತಾಂತರ ನಿಷೇಧ ಕಾಯ್ದೆ ಮಾಡಿದ್ದರು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.

Advertisement

ಬಿಜೆಪಿ ಸರ್ಕಾರ ಮಾಡಿದ ಕಾಯ್ದೆ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಸದನದಲ್ಲಿ ಮಸೂದೆ ಮಂಡಿಸಿದ ವೇಳೆಯೇ ಹೇಳಿದ್ದೆವು. ಈಗ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ. ನಮ್ಮ ಸರ್ಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇದೆ. ಹಾಗಾಗಿ ನಾವು ಮತಾಂತರ ನಿಷೇಧ ಕಾಯ್ದೆಯನ್ನು ಹಿಂತೆಗೆದುಕೊಳ್ಳುತ್ತಿದ್ದೇವೆ ಎಂದರು.

ಬಿಜೆಪಿ ವಿರುದ್ಧ ಪರಂ ವಾಗ್ದಾಳಿ: ಅಕ್ಕಿ ಪೂರೈಕೆ ತಿಕ್ಕಾಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರನ್ನು ಕೇಳಿಕೊಂಡು ಅಧಿಕಾರ ಮಾಡಲು ಆಗುವುದಿಲ್ಲ. ನಾವು ಈಗಾಗಲೇ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೇವೆ. ಅದರಂತೆ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ಎಷ್ಟೇ ಕಷ್ಟವಾದರೂ ಜಾರಿಗೊಳಿಸುತ್ತೇವೆ. ಜನಪರ ಆಡಳಿತ ಕೊಡುವ ವಿಚಾರವಾಗಿ ರಾಜಿ ಪ್ರಶ್ನೆಯೇ ಇಲ್ಲ. ಇವರನ್ನು ಕೇಳಿಕೊಂಡು ನಾವು ಆಡಳಿತ ಮಾಡಬೇಕೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:‘ದೇವರ ಆಟ ಬಲ್ಲವರಾರು…’; 30 ದಿನಗಳಲ್ಲಿ ಎಲ್ಲಾ ಪ್ರಕ್ರಿಯೆ ಮುಗಿಸಿ ಬಿಡುಗಡೆ ಪ್ಲ್ರಾನ್

ರಾಜ್ಯದಲ್ಲಿ ಮರಳು ಮಾಫಿಯಾ ತಲೆ ಎತ್ತಿದೆ ಎಂಬ ಬಿಜೆಪಿ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದ ಅಗತ್ಯವಿಲ್ಲ. ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡುತ್ತೇವೆ ಎಂದರು.

Advertisement

ನೀವು ಸಿಎಂ ಆಗುತ್ತೀರಾ ಎಂದು ಕೇಳಿತ್ತಿದ್ದಂತೆ ಉತ್ತರ ನೀಡದೆ ತೆರಳಿದರು. ‘ಅದೊಂದನ್ನ ಬಿಟ್ಟು ಬೇರೆ ಏನು ಬೇಕಾದರೂ ಕೇಳಿ’ ಎಂದಷ್ಟೆ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next