Advertisement

ಮೂಢನಂಬಿಕೆಗಳಿಗೆ ಕಿವಿಗೊಡದೆ ಲಸಿಕೆ ಪಡೆಯೋಣ : ಡಾ|ಜೆರಾಲ್ಡ್ ಲೋಬೊ

07:01 PM May 09, 2021 | Team Udayavani |

ಉಡುಪಿ: ಕೋವಿಡ್-19 ಸೋಂಕನ್ನು ಸೋಲಿಸಲು ಎಲ್ಲರೂ ತಪ್ಪದೆ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಯಾವುದೇ ಧಾರ್ಮಿಕ ಅಥವಾ ಸಾಮಾಜಿಕ ತಪ್ಪು ತಿಳುವಳಿಕೆ ಹಾಗೂ ಮೂಢನಂಬಿಕೆಗಳಿಗೆ ಬಲಿಯಾಗದೆ ಎಲ್ಲರೂ ಆದಷ್ಟು ಬೇಗ ಲಸಿಕೆಯನ್ನು ಹಾಕಿಸಿಕೊಳ್ಳೋಣ ಎಂದು ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರು ಡಾ| ಜೆರಾಲ್ಡ್ ಲೋಬೊ ಜನತೆಗೆ ಹೇಳಿದ್ದಾರೆ.

Advertisement

ಇಂದು ಪತ್ರಿಕಾ ಪ್ರಕಟಣೆಯಲ್ಲಿ ಜನರಿಗೆ ಕೆಲವೊಂದು ಕಿವಿ ಮಾತು ಹೇಳಿರುವ ಅವರು, ಕಳೆದ ಒಂದು ವರ್ಷದಿಂದ ನಮ್ಮನ್ನು ಕಾಡುತ್ತಿರುವ ಕೋವಿಡ್ -19 ಸೋಂಕಿನಿಂದಾಗಿ ಪ್ರತಿನಿತ್ಯ ಸಾವಿರಾರು ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ವಿಷಮ ಪರಿಸ್ಥಿತಿಯಲ್ಲಿ ನಾವೆಲ್ಲರೂ ಧೈರ್ಯ ಗುಂದದೆ ಇರಬೇಕಾಗಿದೆ. ದಿಟ್ಟತನದಿಂದ ನಮ್ಮ ಜನರನ್ನು ಹಾಗೂ ನಮ್ಮನ್ನು ಈ ಸೋಂಕಿನ ದವಡೆಯಿಂದ ರಕ್ಷಿಸಬೇಕಾಗಿದೆ.

ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ನಾವೆಲ್ಲರೂ ಯಾವುದೇ ಊಹಾಪೋಹಗಳು, ಸುಳ್ಳು ಸುದ್ಧಿ ಅಥವಾ ತಪ್ಪು ತಿಳುವಳಿಕೆಗಳಿಗೆ ಬಲಿಯಾಗದೆ ಪಾಲಿಸುವುದು ಅತ್ಯಗತ್ಯವಾಗಿದೆ. ನಮ್ಮ ಉಡುಪಿ ಜಿಲ್ಲೆಯಲ್ಲಿ ಮೇ 10 ರಿಂದ ಕಟ್ಟುನಿಟ್ಟಿನ ಸಂಪೂರ್ಣ ಲಾಕ್‍ಡೌನ್ ಮಾಡುವುದಾಗಿ ಜಿಲ್ಲಾ ಆಡಳಿತವು ತಿಳಿಸಿದೆ. ಕೋವಿಡ್-19 ಸೋಂಕು ಒಬ್ಬರಿಂದ ಒಬ್ಬರಿಗೆ ಹರಡದೇ ಇರಲು ಇರುವ ಅತ್ಯಂತ ಪರಿಣಾಮಕಾರಿ ಮಾರ್ಗ ಎಂದರೆ ಈ ಸಮಯದಲ್ಲಿ ಪ್ರತಿಯೊಬ್ಬರೂ ತಮ್ಮ ಮನೆಯ ಸುರಕ್ಷತೆಯಲ್ಲೇ ಉಳಿಯುವುದು. ಇದು ಬಹಳ ಕಷ್ಟದ ಕೆಲಸ. ಆದರೂ, ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ನಮ್ಮಿಂದ ಇತರ ಅಮಾಯಕರು ಸೋಂಕಿಗೆ ಬಲಿಯಾಗುವುದನ್ನು ತಪ್ಪಿಸಲು ಎಲ್ಲರೂ ಗರಿಷ್ಠ ಪ್ರಯತ್ನಿಸಿ ಲಾಕ್‍ಡೌನ್‍ನ್ನು ಪಾಲಿಸೋಣ ಎಂದು ಅವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next