Advertisement
ಮಠದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಈ ವಿಷಯ ತಿಳಿಸಿದ ಅವರು, ನನಗೆ ಈಗ 81 ವರ್ಷ ಆಗಿದೆ. ಹೀಗಾಗಿ, ನಮ್ಮ ಮಠದೊಂದಿಗೆ ಅನೇಕ ವರ್ಷಗಳಿಂದ ಸಂಪರ್ಕದಲ್ಲಿರುವ, ಸೇವಾ ಕಾರ್ಯಗಳನ್ನು ಮಾಡುತ್ತ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ನಾಗರಾಜ್ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದೆ. ಈ ಆಯ್ಕೆಗೆ ಮಠದ ಟ್ರಸ್ಟಿನ ಎಲ್ಲಾ ಸದಸ್ಯರು ಸರ್ವಾನುಮತ ದಿಂದ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು.
Related Articles
Advertisement
ಸರ್ಕಾರಿ ಹುದ್ದೆ ತೊರೆದು ಸನ್ಯಾಸ ಸ್ವೀಕರಿಸಿದ ಡಾ.ನಾಗರಾಜ್
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದ ಲಿಂಗಯ್ಯ ಮತ್ತು ಗಂಗಮ್ಮನವರ ಪುತ್ರರಾಗಿರುವ ನಾಗರಾಜ್ ಅವರು ಪ್ರಾಥಮಿಕ ಶಿಕ್ಷಣವನ್ನು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಮುಗಿಸಿದ್ದಾರೆ. ಜತೆಗೆ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮೈಕ್ರೋಫೈನಾನ್ಸ್ ವಿಷಯದಲ್ಲಿ (ಪಿಎಚ್‌ಡಿ) ಪದವಿ ಪಡೆದಿದ್ದಾರೆ. ಮಠದಲ್ಲಿ ವ್ಯಾಸಂಗ ಮಾಡುವಾಗ ಅವರಿಗೆ ಧಾರ್ಮಿಕ ಕಾರ್ಯಗಳ ಬಗ್ಗೆ ಆಸಕ್ತಿ ಬೆಳೆದಿತ್ತು. ಡಾ.ಶಿವಕುಮಾರ ಸ್ವಾಮೀಜಿ ಅವರ ಆದರ್ಶ, ಬಾಲಗಂಗಾಧರನಾಥ ಸ್ವಾಮೀಜಿ ಸೇವಾ ಕಾರ್ಯಗಳಿಂದ ಪ್ರಭಾವಿತರಾಗಿ ಸನ್ಯಾಸತ್ವ ಮತ್ತು ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಸೇವೆ ಮಾಡಬೇಕು ಎಂಬ ಮನಸ್ಸು ಮಾಡಿದರು. ಅದರ ಫಲವಾಗಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತಹಶೀಲ್ದಾರ್, ಹೆಚ್ಚುವರಿ ಜಿಲ್ಲಾಧಿಕಾರಿ, ಮೈಶುಗರ್ ಕಾರ್ಖಾನೆ ಎಂ.ಡಿ. ಆಗಿ ಪ್ರಾಮಾಣಿಕತೆ, ದಕ್ಷತೆ ಸೇವೆ ಸಲ್ಲಿಸಿ ಜನಸೇವಾ ಮನೋಭಾವ ರೂಢಿಸಿಕೊಂಡಿದ್ದಾರೆ ಎಂದು ಮಠದ ಟ್ರಸ್ಟಿಗಳು ಮಾಹಿತಿ ತಿಳಿಸಿದರು.