Advertisement

Mysore ದಸರಾ: ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ ಡಾ.ಎಚ್.ಸಿ.ಮಹದೇವಪ್ಪ

01:49 PM Oct 11, 2023 | Team Udayavani |

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು.

Advertisement

ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿ, ಶಾಲು ಹೊದಿಸಿ, ವಿಶೇಷ ಪುಷ್ಪಮಾಲಿಕೆಯೊಂದಿಗೆ ಸನ್ಮಾನಿಸಿ, ಫಲತಾಂಬೂಲದ ಜೊತೆಗೆ ಆಹ್ವಾನ ಪತ್ರಿಕೆ ನೀಡುವ ಮೂಲಕ ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಆತ್ಮೀಯವಾಗಿ ಕೋರಿದರು.

ಈ ವೇಳೆ ಮೇಯರ್ ಶಿವಕುಮಾರ್, ಶಾಸಕರಾದ ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next