ಚಿಕ್ಕಬಳ್ಳಾಪುರ: ಸಂವಿಧಾನ ಶಿಲ್ಪಿ ಡಾ|| ಬಿ.ಆರ್. ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಹಾಗೂ ಮಾಜಿ ಉಪಪ್ರಧಾನಿ ಡಾ|| ಬಾಬು ಜಗಜೀವನ ರಾಂ ಅವರ 115ನೇ ಜಯಂತಿ ಅಂಗವಾಗಿ ಇಂದು ನಗರದಲ್ಲಿ ‘ಸಾಮಾಜಿಕ ನ್ಯಾಯದೆಡೆಗೆ’ ಎಂಬ ವಿನೂತನ ಕಾಲ್ನಡಿಗೆ (ವಾಕಥಾನ್) ಜಾಥಾಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಚಾಲನೆ ನೀಡಿದರು.
ಜಾಥಾ ಕಾರ್ಯಕ್ರಮವು ನಗರದ ಜೈಭೀಮ್ ಬಾಲಕರ ವಿದ್ಯಾರ್ಥಿ ನಿಲಯದಿಂದ ಆರಂಭವಾಗಿ ಗೌರಿಬಿದನೂರು ರಸ್ತೆ ಮತ್ತು ಬಿ.ಬಿ ರಸ್ತೆಗಳ ಮುಖಾಂತರ ಜೂನಿಯರ್ ಕಾಲೇಜು ಆವರಣದವರೆಗೆ ಸಾಗಿತು. ಈ ಜಾಥಾ ಕಾರ್ಯಕ್ರಮದಲ್ಲಿ ವಿವಿಧ ಶಾಲಾ-ಕಾಲೇಜುಗಳ ಮೂರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿ ಸಹಬಾಳ್ವೆ, ಸಮಾನತೆ, ಸಹ ಮಾನವರೊಂದಿಗೆ ಸಹೋದರತೆ ಹಾಗೂ ಸಾಮಾಜಿಕ ನ್ಯಾಯದ ಜಾಗೃತಿ ಕುರಿತಾಗಿ ಸಚಿವರಿಂದ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನೂ ಓದಿ:ಈಶ್ವರಪ್ಪ ವಿರುದ್ದ ಆರೋಪದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ; ಸಂಸದ ರಾಘವೇಂದ್ರ
ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್. ಲತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಪಿ. ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ವಿವಿಧ ಸಂಘಟನೆಗಳ ಮುಖಂಡರುಗಳು ಮತ್ತು ಪದಾಧಿಕಾರಿಗಳು, ದಲಿತ ಸಮುದಾಯದ ಮುಖಂಡರುಗಳು ಮತ್ತು ಪದಾಧಿಕಾರಿಗಳು, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.