Advertisement
ಆರೋಗ್ಯ ಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಯುದ್ಧದಲ್ಲಿ ಮಡಿದ ಸೈನಿಕರನ್ನು ಮಾತ್ರ ಹುತಾತ್ಮರು ಎಂದು ಕರೆಯಲಾಗುತ್ತದೆ. ದೇಶದಲ್ಲಿ 700 ಕ್ಕೂ ಅಧಿಕ ವೈದ್ಯರು ಕೋವಿಡ್ ಕರ್ತವ್ಯದಲ್ಲಿ ಸಾವನ್ನಪ್ಪಿದ್ದಾರೆ. ವೈದ್ಯರು, ಆರೋಗ್ಯ ಸಿಬ್ಬಂದಿ ಕೋವಿಡ್ ವಿರುದ್ಧದ ಯುದ್ಧದಲ್ಲಿರುವುದರಿಂದ ಅವರನ್ನು ಯೋಧರು ಎಂದು ಕರೆಯಲಾಗಿದೆ. ಹಾಗೆಯೇ ಈ ಕಾರ್ಯದಲ್ಲಿ ಮೃತರಾದವರನ್ನು ಹುತಾತ್ಮರು ಎಂದು ಕರೆಯಲಾಗಿದೆ. ಈ ಹುತಾತ್ಮ ವೈದ್ಯರ ಸ್ಮರಣಾರ್ಥ ಆರೋಗ್ಯ ಸೌಧದ ಆವರಣದಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಉತ್ತಮ ವಿನ್ಯಾಸ ಮಾಡಿಸಿ ಸ್ಮಾರಕ ನಿರ್ಮಿಸಿ ಮುಖ್ಯಮಂತ್ರಿಗಳಿಂದ ಉದ್ಘಾಟಿಸಲಾಗುವುದು. ವೈದ್ಯರ ಕುಟುಂಬದವರು ಪ್ರತಿ ವರ್ಷದ ನಿಗದಿತ ದಿನ ಬಂದು ಸ್ಮಾರಕಕ್ಕೆ ನಮನ ಸಲ್ಲಿಸುವ ಕಾರ್ಯಕ್ರಮ ಮಾಡಲಾಗುವುದು ಎಂದು ತಿಳಿಸಿದರು.
Related Articles
Advertisement
ವೈದ್ಯರ ಮೇಲೆ ಹಲ್ಲೆ : ಎಚ್ಚರಿಕೆ
ರೋಗಿಗಳ ಕಡೆಯವರು ವೈದ್ಯರು, ಆರೋಬ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡುವುದನ್ನು ಸರ್ಕಾರ ಉಗ್ರವಾಗಿ ಖಂಡಿಸುತ್ತದೆ. ಯಾವುದೇ ವೈದ್ಯ ಕೊನೆ ಗಳಿಗೆವರೆಗೆ ಜೀವ ಉಳಿಸಲು ಕೆಲಸ ಮಾಡುತ್ತಾರೆ. ರೋಗಿ ಸಾಯಲಿ ಎಂದು ಯಾರೂ ಬಯಸುವುದಿಲ್ಲ. ದುಃಖಕ್ಕೊಳಗಾದ ವೇಳೆ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಹಾಗೇನಾದರೂ ಮಾಡಿದರೆ ಕಠಿಣ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ. ವೈದ್ಯರ ಮೇಲೆ ಹಲ್ಲೆ ನಡೆಸಿದರೆ 5-7 ವರ್ಷ ಜೈಲುವಾಸದ ಶಿಕ್ಷೆ ಇದೆ ಎಂದು ಸಚಿವರು ಎಚ್ಚರಿಕೆ ನೀಡಿದರು.
ಇನ್ನು, ಐಎಂಎನಲ್ಲಿ ನಡೆದ ವೈದ್ಯರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಎಲ್ಲ ವೈದ್ಯರು ಐಎಂಎನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಹಳ್ಳಿಗಳಲ್ಲಿ ಕೆಲಸ ಮಾಡುವವರಿಗೆ ಹೆಚ್ಚು ಭತ್ಯೆ, ಬಡ್ತಿ ನೀಡುವ ಚಿಂತನೆ ಇದೆ ಎಂದರು.
ಇದನ್ನೂ ಓದಿ : ಬಲು ಅಪರೂಪದ ಕೊಂಡದಕುಳಿ ಭಾಗವತಿಕೆ