Advertisement
ವಿಜಯಪುರದ ಬಿ ಎಲ್ ಡಿಇ ಮೆಡಿಕಲ್ ಕಾಲೇಜಿನ ಮುಖ್ಯಸ್ಥರಾದ ಮಾಜಿ ಸಚಿವ ಎಂ.ಬಿ.ಪಾಟೀಲ್ ಕೊರೊನಾದಿಂದಾಗಿ ಬಾಧಿತರಾಗಿರುವ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ರಾಜ್ಯ ಸರ್ಕಾರದಿಂದ ಖಾಸಗಿ ಆಸ್ಪತ್ರೆಗಳ ಶೇ.50 ರಷ್ಟು ಹಾಸಿಗೆಗಳನ್ನು ಕೋವಿಡ್ ಗೆ ಮೀಸಲಿಡುವ ಕ್ರಮ ಜಾರಿಯಲ್ಲಿದೆ. ಆದರೆ ಜನಪ್ರತಿನಿಧಿಯಾಗಿ ಜನರ ಸಮಸ್ಯೆಗಳನ್ನು ಅರಿತಿರುವ ಹಿರಿಯ ರಾಜಕಾರಣಿ ಎಂ.ಬಿ.ಪಾಟೀಲ್, ತಮ್ಮ ಆಸ್ಪತ್ರೆಯಲ್ಲಿ ಹಾಸಿಗೆಗಳ ದರವನ್ನು ಶೇ.70 ರಷ್ಟು ಕಡಿತಗೊಳಿಸಿದ್ದಾರೆ. ಜೊತೆಗೆ 500 ಹಾಸಿಗೆಗಳನ್ನು ಆರ್ಥಿಕವಾಗಿ ದುರ್ಬಲರಾದ ವರ್ಗಕ್ಕೆ ಮೀಸಲಿಟ್ಟಿದ್ದಾರೆ. ಈ ಜನಸ್ನೇಹಿ ಕ್ರಮ ಇಂತಹ ಕೋವಿಡ್ ಪರಿಸ್ಥಿತಿಗೆ ಬಹಳಷ್ಟು ನೆರವಾಗಿದೆ. ಇದಕ್ಕಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.
Related Articles
Advertisement
ಕೋವಿಡ್ ಸಾಂಕ್ರಾಮಿಕದ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ರಾಜ್ಯ ಸರ್ಕಾರ ಹಾಗೂ ಅಧಿಕಾರಿ, ಸಿಬ್ಬಂದಿ ವರ್ಗ ಅವಿರತವಾಗಿ ಶ್ರಮಿಸುತ್ತಿದೆ. ಯಾವುದೇ ಪಕ್ಷ, ಸಿದ್ಧಾಂತಗಳ ಭೇದವಿಲ್ಲದೆ ಜನಪ್ರತಿನಿಧಿಗಳು, ಸಂಘ, ಸಂಸ್ಥೆಗಳು ಕೋವಿಡ್ ಹೋರಾಟದಲ್ಲಿ ಭಾಗಿಯಾಗಿರುವುದು ಒಗ್ಗಟ್ಟಿನ ಸಂಕೇತವಾಗಿದೆ. ಇಂತಹ ಒಗ್ಗಟ್ಟಿನ ಹೋರಾಟದಿಂದ ನಾವು ಕೊರೊನಾವನ್ನು ಮಣಿಸಬೇಕಿದೆ. ಇನ್ನೂ ಹೆಚ್ಚು ಸಂಘ, ಸಂಸ್ಥೆಗಳು ಮುಂದೆ ಬಂದು ತಮ್ಮ ವ್ಯಾಪ್ತಿಯಲ್ಲಿ ಕೊರೊನಾ ಸಾಂಕ್ರಾಮಿಕವನ್ನು ಹೊಡೆದೋಡಿಸಲು ನೆರವಾಗಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.