Advertisement
ಶಾಸಕ ಎಸ್.ಆರ್.ವಿಶ್ವನಾಥ್ ಈವರೆಗೆ ಎನ್‌ಡಿಎಲ್ ಅಭ್ಯರ್ಥಿ ಡಾ.ಕೆ.ಸುಧಾಕರ್‌ಗೆ ಬೆಂಬಲಿಸುವುದಿಲ್ಲ ಎಂದು ಬಹಿರಂಗ ವಿರೋಧ ವ್ಯಕ್ತಪಡಿಸಿದ್ದರು. ತಮ್ಮ ಪುತ್ರನಿಗೆ ಟಿಕೆಟ್ ನೀಡದ ಕಾರಣ ಸಹಜವಾಗಿಯೇ ಶಾಸಕ ವಿಶ್ವನಾಥ್ ಮುನಿಸಿಕೊಂಡಿದ್ದರು. ಇಬ್ಬರ ನಡುವಿನ ವೈಮನಸ್ಸು ತಿಳಿಗೊಂಡಿದ್ದು, , ಈ ಒಳಬೇಗುದಿಯನ್ನೇ ನೆಚ್ಚಿಕೊಂಡಿದ್ದ ಕಾಂಗ್ರೆಸ್ ನಾಯಕರಿಗೆ ಮಹಾ ಶಾಕ್ ಆಗಿದೆ.
Related Articles
Advertisement
ಮತದಾರರ ಹೆಚ್ಚಳ: ಕಾಂಗ್ರೆಸ್ ಲೆಕ್ಕಾಚಾರ ಉಲ್ಟಾ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳ ಪೈಕಿ, ಯಲಹಂಕ ವಿಧಾನಸಭಾ ಕ್ಷೇತ್ರ ಅತಿ ಹೆಚ್ಚು ಮತದಾರರನ್ನು ಹೊಂದಿದೆ. ಲೋಕಸಭಾ ಕ್ಷೇತ್ರದಲ್ಲಿ 19.50 ಲಕ್ಷ ಮತದಾರರಿದ್ದು, ಯಲಹಂಕ ಕ್ಷೇತ್ರವೊಂದರಲ್ಲೇ 4.45 ಲಕ್ಷ ಮತದಾರರಿದ್ದಾರೆ. ಹೀಗಾಗಿ ಇಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕರ ನಡುವಿನ ಮನಸ್ತಾಪವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಬಹುದೆಂದು ಕಾಂಗ್ರೆಸ್ ಲೆಕ್ಕಾಚಾರ ಹಾಕಿತ್ತು. ಜೊತೆಗೆ ಇಲ್ಲಿ ಹೆಚ್ಚು ಮತ ಪಡೆದರೆ ಒಟ್ಟು ಮತ ಗಳಿಕೆಯ ಮೇಲೆ ನಿರ್ಣಾಯಕ ಪರಿಣಾಮ ಬೀರಬಹುದು ಎಂಬ ಅಂದಾಜು ಇತ್ತು. ಆದರೆ ಈಗ ಕಾಂಗ್ರೆಸ್ ಈ ಬೆಳವಣಿಗೆ ಶಾಕ್ ನೀಡಿದೆ.
ಇಂದು ಬೃಹತ್ ರೋಡ್ ಶೋ ಮೂಲಕ ಸುಧಾಕರ್ ಶಕ್ತಿ ಪ್ರದರ್ಶನ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಗುರುವಾರ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಬೃಹತ್ ರೋಡ್ ಶೋ ನಡೆಯಲಿದೆ. ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿ ಇರುವುದರಿಂದ ಅಭ್ಯರ್ಥಿ ಪರ ಒಲವು ಕಂಡುಬಂದಿದೆ. ಈ ಮಹಾ ಶಕ್ತಿಯೊಂದಿಗೆ ಡಾ.ಕೆ.ಸುಧಾಕರ್ ನಾಮಪತ್ರ ಸಲ್ಲಿಸಲಿದ್ದಾರೆ.
ಬೆಳಗ್ಗೆ ಡಾ.ಕೆ.ಸುಧಾಕರ್ ದೇವನಹಳ್ಳಿ ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಚಿತ್ರವನದ ಯೋಗಿ ನಾರಾಯಣ ದೇವಸ್ಥಾನ ಹಾಗೂ ವೀರಾಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಇದೇ ವೇಳೆ ಪೌರಕಾರ್ಮಿಕರು, ಆಟೋ ಚಾಲಕರು, ರೈತರು, ಮಹಿಳೆಯರು ಹಾಗೂ ಹಿರಿಯ ನಾಗರಿಕರ ಆಶೀರ್ವಾದ ಪಡೆಯಲಿದ್ದಾರೆ. ನಂತರ ಚಿಕ್ಕಬಳ್ಳಾಪುರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಹಾಗೂ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರದ ಒಕ್ಕಲಿಗರ ಕಲ್ಯಾಣ ಮಂಟಪದಿಂದ ಶಿಡ್ಲಘಟ್ಟ ವೃತ್ತದವರೆಗೆ ರೋಡ್ ಶೋ ನಡೆಯಲಿದೆ.
ಹಿರಿಯ ನಾಯಕರಾದ ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ, ಬೆಂಗಳೂರು ಕೇಂದ್ರ ಲೋಕಸಭಾ ಅಭ್ಯರ್ಥಿ ಪಿ.ಸಿ.ಮೋಹನ್, ಮಾಜಿ ಶಾಸಕ ಅರವಿಂದ ಲಿಂಬಾವಳಿ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ತಾರಾ ಅನುರಾಧ ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ. ಶಿಡ್ಲಘಟ್ಟ ವೃತ್ತದಲ್ಲಿ ಜನರನ್ನುದ್ದೇಶಿಸಿ ನಾಯಕರು ಮಾತನಾಡಲಿದ್ದಾರೆ. ■ ಉದಯವಾಣಿ ಸಮಾಚಾರ