Advertisement

 ಡಾ.ಕಲಬುರ್ಗಿ ಹತ್ಯೆ: ತನಿಖೆಚುರುಕುಗೊಳಿಸಲು ಸಿಎಂ ಸೂಚನೆ

09:45 AM Aug 29, 2017 | Team Udayavani |

ಬೆಂಗಳೂರು: ಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಐಡಿಗೆ ಸೂಚನೆ ನೀಡಿದ್ದಾರೆ. 2015 ಆಗಸ್ಟ್‌ 30 ರಂದು ಪ್ರಕರಣ ನಡೆದರೂ ಇದುವರೆಗೂ ಆರೋಪಿಗಳ ಪತ್ತೆಯಾಗದಿರುವುದಕ್ಕೆ ರಾಜ್ಯವ್ಯಾಪಿ ನಾನಾ ರೀತಿಯ ಆಕ್ಷೇಪಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಚುರುಕುಗೊಳಿಸುವಂತೆ ನಿರ್ದೇಶಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣದ ತನಿಖೆಯು ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಆರೋಪಿಗಳ ಬಂಧನವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತನಿಖೆಯನ್ನು ಕ್ಷಿಪ್ರ ಗತಿಯಲ್ಲಿ ನಡೆಸುವಂತೆ ಸೂಚಿಸಿದ್ದೇನೆ. ಸಮೀಪ ದೃಷ್ಟಿಕೋನದಿಂದ ಪರಿಶೀಸಲು ತಿಳಿಸಿದ್ದೇನೆ. ಈ ನಿಟ್ಟಿನಲ್ಲಿ ಮಹಾರಾಷ್ಟ್ರ ತನಿಖಾ ತಂಡದ ಜತೆ ಕರ್ನಾಟಕ ತನಿಖಾ ತಂಡ ಚರ್ಚಿಸಲಿದೆ. ಎಂದು ಹೇಳಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next