Advertisement
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಏರ್ಪಡಿಸಿದ್ದ ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಗಿರಬೇಕಾದ ಮುನ್ನೆಚ್ಚರಿಕೆ ವಿಷಯದ ಬಗ್ಗೆ ಅವರು ವೆಬಿನಾರ್ ಮೂಲಕ ಮಾತನಾಡಿ, ಸಂವಾದ ನಡೆಸಿದರು. ರಾಜ್ಯದಲ್ಲಿ ಒಂದೂವರೆಯಿಂದ ಎರಡು ಕೋಟಿ ಮಂದಿ ಸೋಂಕಿಗೆ ಒಳಗಾಗಿದ್ದಾರೆ ಎನ್ನುವ ಮಾಹಿತಿ ಇದೆ. ಕೋವಿಡ್ ಎರಡನೇ ಅಲೆ ಮರಣ ಮೃದಂಗ ಬಾರಿಸುತ್ತಿದೆ ಎಂದರು.
Related Articles
Advertisement
ಕೋವಿಡ್ ವಿರುದ್ದ ಹೋರಾಟಕ್ಕೆ ಇನ್ನೂ ಮೂರರಿಂದ ನಾಲ್ಕು ತಿಂಗಳು ಪ್ರತೀ ಕ್ಷಣವೂ ಸಜ್ಜಾಗಿರಬೇಕು. ಇದೇ ವೇಳೆ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಮೂಲಕ ಅವರು ಶೀಘ್ರವಾಗಿ ಗುಣಮುಖರಾಗಲು ಪ್ರತಿಯೊಬ್ಬರೂ ನೆರವಾಗಬೇಕು ಎಂದರು.
ವ್ಯಾಕ್ಸಿನ್, ಮಾಸ್ಕ್ ಹಾಗೂ ವ್ಯಕ್ತಿಗತ ಅಂತರ ಕಾಪಾಡುವ ಮೂಲಕ ದೇಶದ ಆರೋಗ್ಯ ಕಾಪಾಡುವ ಹೊಣೆಗಾರಿಗೆ ನಮ್ಮೆಲ್ಲರದ್ದು ಎನ್ನುವ ಜವಾಬ್ದಾರಿ ಅರಿತು ಮುನ್ನಡೆಯಬೇಕು ಎಂದು ಮನವಿ ಮಾಡಿದರು. ಕೋವಿಡ್ ಸಂದರ್ಭದಲ್ಲಿ ಆತ್ಮವಿಶ್ವಾಸವನ್ನು ಗಟ್ಟಿಗೊಳಿಸುವ ವರದಿಗಳು ಮುಖ್ಯ. ಸ್ಮಶಾನ ಮತ್ತಿತರ ವರದಿ ಬದಲು ಗುಣಾತ್ಮಕ ವರದಿ ಮಾಧ್ಯಮದಲ್ಲಿ ಹೆಚ್ಚು ಬರಲಿ ಎಂದರು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಪ್ರಸ್ತಾವಿಕವಾಗಿ ಮಾತನಾಡಿ, ಸುದ್ದಿಮನೆಯಲ್ಲಿ ಕೆಲಸ ಮಾಡುವ ಪತ್ರಕರ್ತರು ಮತ್ತು ಸಿಬ್ಬಂದಿಗಳು ಒತ್ತಡದಲ್ಲಿದ್ದು, ಕೋವಿಡ್ ಸಂದರ್ಭದಲ್ಲಿ ಅವರು ವಹಿಸಬೇಕಾದ ಮುನ್ನೆಚ್ಚರಿಕೆ ಬಹಳ ಮುಖ್ಯವಾಗಿದ್ದು, ಅದಕ್ಕಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಕಳೆದ ಕೊವಿಡ್ ಅವಧಿಯಲ್ಲಿ ಮೃತಪಟ್ಟ 31 ಪತ್ರಕರ್ತರ ಕುಟುಂಬಗಳಿಗೆ ತಲಾ 5ಲಕ್ಷ ನೆರವು ಕೊಡಲಾಗಿದೆ. ಒಂದೂವರೆ ವರ್ಷದ ಜಾಹೀರಾತು ಬಾಕಿ 56 ಕೋಟಿ ಮಂಜೂರು ಮಾಡಿಸಲಾಯಿತು. ಪತ್ರಕರ್ತರಿಗಾಗಿ ಉಚಿತವಾಗಿ ಹೆಲ್ತ್ ಕಾರ್ಡ್ ಕೊಡಿಸಲಾಗಿದೆ ಎಂದರು. ಮಾಧ್ಯಮದ ಹಿರಿಯ ಕಿರಿಯ ಪತ್ರಕರ್ತರು ಸಂವಾದದಲ್ಲಿ ಭಾಗವಹಿಸಿದ್ದರು.