ಬೆಂಗಳೂರು: ಹಿರಿಯ ಸಾಹಿತಿ ಮತ್ತು ‘ಪ್ರಪಂಚ’ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿದ್ದ ಪತ್ರಕರ್ತ ಶತಾಯುಷಿ ಡಾ. ಪಾಟೀಲ ಪುಟ್ಟಪ್ಪನವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜೀ ಮುಖ್ಯಮಂತ್ರಿಗಳಾದ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ, ಜೆಡಿಎಸ್ ಮುಖಂಡ ಹಾಗೂ ಮಾಜೀ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜೀ ಪ್ರಧಾನಿ ಮತ್ತು ಜೆಡಿ(ಎಸ್) ಪಕ್ಷದ ವರಿಷ್ಠ ದೇವೇಗೌಡ ಸಹಿತ ಸಹಿತ ಹಲವಾರು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.
‘ರಾಜ್ಯದ ನೆಲ-ಜಲ-ಭಾಷೆಯ ರಕ್ಷಣೆಗಾಗಿ ಸದಾ ಟೊಂಕಕಟ್ಟಿ ನಿಲ್ಲುತ್ತಿದ್ದ ಪಾಪು ಕನ್ನಡದ ನಿಷ್ಠಾವಂತ ಕಾವಲುಗಾರರಾಗಿದ್ದರು.
ಅವರ ಗೆಳೆಯರು ಮತ್ತು ಕುಟುಂಬದವರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.’ ಎಂದು ಕಾಂಗ್ರೆಸ್ ನಾಯಕ ಮತ್ತು ಮಾಜೀ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.