Advertisement

ಡಾ|ಪ್ರಭಾಕರ ಭಟ್‌ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

11:00 PM Apr 05, 2022 | Team Udayavani |

ಬಂಟ್ವಾಳ: ಆರೆಸ್ಸೆಸ್‌ ಮುಂದಾಳು ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಮಂಗಳವಾರ ಸಂಜೆ ಅವರು ಎಂದಿನಂತೆ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿರುವ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ತತ್‌ಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಳಿಕ ಅವರು ಚೇತರಿಸಿಕೊಂಡಿದ್ದು, ಯಾವುದೇ ಆತಂಕವಿಲ್ಲ ಎಂದು ಮೂಲಗಳು ತಿಳಿಸಿವೆ.

 

Advertisement

Udayavani is now on Telegram. Click here to join our channel and stay updated with the latest news.

Next