Advertisement

ಅಣ್ಣಾವ್ರ 90 ನೇ ಜನ್ಮದಿನ ; ಕಂಠೀರವದಲ್ಲಿ ಅಭಿಮಾನಿಗಳ ದಂಡು

09:06 AM Apr 25, 2019 | Team Udayavani |

ಬೆಂಗಳೂರು : ವರನಟ ಡಾ.ರಾಜ್‌ಕುಮಾರ್‌ ಅವರ 90 ನೇ ಜನ್ಮ ದಿನಾಚರಣೆಯನ್ನು ರಾಜ್ಯಾದ್ಯಂತ ಅಭಿಮಾನಿಗಳು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ರಕ್ತದಾನ, ಅನ್ನದಾನ ಸೇರಿದಂತೆ ವಿವಿದ ಸಾಮಾಜಿಕ ಕಳಕಳಿಕ ಕಾರ್ಯಗಳನ್ನು ಮೇರು ನಟ ಡಾ.ರಾಜ್‌ಕುಮಾರ್‌ ಅವರ ಹೆಸರಿನಲ್ಲಿ ನಡೆಸಲಾಗುತ್ತಿದೆ.

Advertisement

ರಾಜ್‌ಕುಮಾರ್‌ ಅವರ ಸಮಾಧಿಯಿರುವ ಕಂಠೀರವ ಸ್ಟುಡಿಯೋಗೆ ಕುಟುಂಬ ಸದಸ್ಯರು ಆಗಮಿಸಿ ಪುಷ್ಪ ನಮನ ಸಲ್ಲಿಸಿದರು. ಸಾವಿರಾರು ಅಭಿಮಾನಿಗಳು ಕಂಠೀರವ ಸ್ಟುಡಿಯೋಗೆ ಆಗಮಿಸಿದ್ದು ನೆಚ್ಚಿನ ನಟನನ್ನು ನೆನೆಯುತ್ತಿದ್ದಾರೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದಇಂದು ಬುಧವಾರ ಬೆಂಗಳೂರಿನಲ್ಲಿ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಸಿನಿ ರಂಗದ ಗಣ್ಯರು ಮತ್ತು ರಾಜ್‌ಕೈಮಾರ್‌ ಕುಟುಂಬ ಸದಸ್ಯರು, ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸರ್ಕಾರದಿಂದಲೂ ಜನ್ಮದಿನ ಆಚರಣೆ

ಈ ಬಾರಿ ಸರ್ಕಾರದ ವತಿಯಿಂದಲೂ ಡಾ.ರಾಜ್‌ ಅವರ ಜನ್ಮ ದಿನಾಚರಣೆ ಆಚರಿಸಲಾಗುತ್ತಿದೆ.

Advertisement

ಡಾ. ರಾಜ್ ಕುಮಾರ್ ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ. ತೆರೆಯ ಮೇಲಷ್ಟೇ ಅಲ್ಲ, ನಿಜ ಜೀವನದಲ್ಲಿಯೂ ಅವರ ಔದಾರ್ಯ, ಅಂತಃಕರಣ, ಜೀವನ ಮೌಲ್ಯಗಳು ಅನುಕರಣೀಯ. ನಾಳೆ ಅವರ ಹುಟ್ಟುಹಬ್ಬ. ರಾಜ್ಯ ಸರ್ಕಾರ ರಾಜ್ಯದೆಲ್ಲೆಡೆ ರಾಜಣ್ಣ ಅವರ ಹುಟ್ಟು ಹಬ್ಬ ಚರಿಸುತ್ತಿದೆ.ಎಲ್ಲರೂ ಭಾಗವಹಿಸಿ.  ಡಾ ರಾಜ್ ಹುಟ್ಟುಹಬ್ಬದ ಶುಭಾಶಯಗಳು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next