Advertisement
ಜಿಲ್ಲೆಯ ಮೈಲಿಗಲ್ಲು: ಕನ್ನಡದ ಮೇರುನಟ, ಜಿಲ್ಲೆಯ ಹೆಮ್ಮೆಯ ಪುತ್ರ ಡಾ. ರಾಜ್‌ಕುಮಾರ್ ಅವರ ಹೆಸರಿನಲ್ಲಿ ನಿರ್ಮಿಸಿರುವ ರಂಗಮಂದಿ ರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಸ್ವಾತಂತ್ರÂದ ಅಮೃತ ಮಹೋತ್ಸವ ಹಾಗೂ ಜಿಲ್ಲೆ ರೂಪುಗೊಂಡು 25 ವರ್ಷಗಳನ್ನುಪೂರ್ಣಗೊಳಿಸುತ್ತಿರುವ ರಜತ ಮಹೋತ್ಸವದ ಅಮೃತ ಘಳಿಗೆಯಲ್ಲಿ ಡಾ. ರಾಜ್ ಕುಮಾರ್ ಅವರ ಹೆಸರಿನ ರಂಗಮಂದಿರ ಉದ್ಘಾಟನೆಯಾಗುತ್ತಿರುವುದು ಜಿಲ್ಲೆಯ ಮೈಲಿಗಲ್ಲು ಹಾಗೂ ಐತಿಹಾಸಿಕ ದಿನವೆಂದು ಬಣ್ಣಿಸಿದರು. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಂಗಮಂದಿರವನ್ನು ಆ. 15ರಂದು ಉದ್ಘಾಟಿಸಲು ಅನುವಾಗುವಂತೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ್ದೆ. ಅದರಂತೆ ಇಂದು ರಂಗಮಂದಿರ ಲೋಕಾರ್ಪಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಕಟ್ಟಡಗಳಾಗಲಿ ಬಹಳ ವರ್ಷಗಳಿಂದಲೂ ಪೂರ್ಣವಾಗದಿದ್ದರೆ ಬೇಸರವಾಗುತ್ತದೆ. ಹೀಗಾಗಿ ಯಾವುದೇ ಕಟ್ಟಡಗಳು ಪೂರ್ಣವಾಗಲು ತ್ವರಿತವಾಗಿ ಕ್ರಮ ಕೈಗೊಳ್ಳುವ ಸಂಬಂಧ ಅಧಿಕಾರಿಗಳು ಸಭೆ ನಡೆಸಬೇಕು ಎಂದು ಸಚಿವರು ತಿಳಿಸಿದರು.
Related Articles
Advertisement
ಶಾಸಕ ಸಿ. ಪುಟ್ಟರಂಗಶೆಟ್ಟಿ, ಕಾಡಾ ಆಧ್ಯಕ್ಷ ಜಿ. ನಿಜಗುಣರಾಜು, ನಗರಸಭೆ ಅಧ್ಯಕ್ಷೆ ಸಿ.ಎಂ. ಆಶಾ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜು. ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ವಿನಯ್‌ಕುಮಾರ್, ಜಾನಪದ ಗಾಯಕ ಸಿ.ಎಂ. ನರಸಿಂಹಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಆರ್. ಜಯಪ್ರಕಾಶ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.