Advertisement
ಕೋಲಾರ: ಶಿಸ್ತುಬದ್ಧ ಜೀವನವನ್ನು ಸಾಗಿಸಿದಡಾ.ರಾಜ್‌ಕುಮಾರ್ ಆದರ್ಶ ಪ್ರತಿಯೊಬ್ಬರಿಗೂ ದಾರಿ ದೀಪವಾಗಲಿ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.
Related Articles
Advertisement
ಸರ್ಕಾರವು ಡಾ.ರಾಜ್‌ಕುಮಾರ್ ಅವರ ಜನ್ಮದಿನವನ್ನು ರಾಜ್ಯಾದ್ಯಂತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಚರಣೆ ಮಾಡುತ್ತಿದೆ.ಜಿಲ್ಲೆಯಲ್ಲಿಯೂ ಜಿಲ್ಲಾಡಳಿತದ ಸಹಯೋಗದೊಂದಿಗೆಆಚರಣೆ ಮಾಡಲಾಗುತ್ತಿದೆ ಎಂದ ಅವರು, ಡಾ. ರಾಜ್ ಕುಮಾರ್ ಅವರ ಜನ್ಮ ದಿನದ ಸಂದರ್ಭಕ್ಕೆ ಎಲ್ಲರಿಗೂ ಶುಭಕೋರಿದರು.ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಜನ್ಮ ದಿನವನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಸನ್ಮಾನ: ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಗಳಪರ ಕಲಾವಿದ ವಿಷ್ಣು ಅವರು, ಜಿಲ್ಲಾಧಿಕಾರಿಗಳಿಗೆ ಸನ್ಮಾನ ಮಾಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಪಲ್ಲವಿ ಹೊನ್ನಾಪುರ ಅವರು, ಕಾರ್ಯಕ್ರಮಕ್ಕೆ ಆಗಮಿಸಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಯವರನ್ನು ವಂದಿಸಿದರು.
ಅಪರ ಜಿಲ್ಲಾಧಿಕಾರಿ ಎಚ್.ಪುಷ್ಪಲತಾ, ಕೆಎಸ್‌ಆರ್‌ಟಿಸಿ. ವಿಭಾಗೀಯ ನಿಯಂತ್ರಣಾ ಧಿಕಾರಿ ಹಿಮವರ್ಧನ್ ನಾಯ್ಡು ಅಲ್ಲೂರಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೆಂಕಟಸ್ವಾಮಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಸೌಮ್ಯಾ, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಗೀತಾ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ಉಪಸ್ಥಿತರಿದ್ದರು.