Advertisement

ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಡಾ.ರಮೇಶ್ ಅರವಿಂದ್ ಆಯ್ಕೆ

03:08 PM Sep 24, 2022 | Team Udayavani |

ಉಡುಪಿ : ಕೋಟತಟ್ಟು ಗ್ರಾಮ ಪಂಚಾಯತ್ , ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.)ಕೋಟದ ಸಹಭಾಗಿತ್ವದಲ್ಲಿ ನೀಡಲಾಗುವ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ 2022 ನೇ ಸಾಲಿನ ಪ್ರಶಸ್ತಿಗೆ ಪ್ರಖ್ಯಾತ ನಟ ಡಾ.ರಮೇಶ್ ಅರವಿಂದ್ ಆಯ್ಕೆಯಾಗಿದ್ದಾರೆ.

Advertisement

ಕಳೆದ ಹದಿನೇಳು ವರ್ಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡಲಾಗುತ್ತಿದ್ದು, ದಶಕಗಳಿಂದ ಚಲನಚಿತ್ರ ಹಾಗೂ ಸಾಮಾಜಿಕ ಮಾಧ್ಯಮ ಕ್ಷೇತ್ರದಲ್ಲಿ ನಟ, ನಿರ್ದೇಶಕ, ನಿರೂಪಕ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರಮಟ್ಟದಲ್ಲಿ ಸಾಧನೆಗೈದು ಕೀರ್ತಿ ಗಳಿಸಿದ ಡಾ.ರಮೇಶ್ ಅರವಿಂದ್ ಆಯ್ಕೆಯಾಗಿದ್ದಾರೆ.

ಅಕ್ಟೋಬರ್ 10 ರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನದಂದು ಡಾ. ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಡಾ|ಶಿವರಾಮ ಕಾರಂತ ಪ್ರತಿಷ್ಠಾನ (ರಿ)ಕೋಟದ ಕಾರ್ಯಾಧ್ಯಕ್ಷ  ಆನಂದ ಸಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next