Advertisement

ಡಾ|ಸತೀಶ್‌ ಸೇವೆ ಅವಿಸ್ಮರಣೀಯ

05:08 PM Sep 02, 2017 | |

ಯಾದಗಿರಿ: ಅಪರ ಜಿಲ್ಲಾಧಿಕಾರಿ ಡಾ|ಬಿ.ಸಿ. ಸತೀಶ್‌ ಅವರು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಬೀಳ್ಕೊಡಲಾಯಿತು.

Advertisement

ಯಾದಗಿರಿ ಅಪರ ಜಿಲ್ಲಾಧಿಕಾರಿಗಳಾಗಿ ಒಂದು ವರ್ಷ ಸೇವೆ ಸಲ್ಲಿಸಿರುವ ಡಾ| ಬಿ.ಸಿ. ಸತೀಶ್‌ ಅವರು ಸರಕಾರದ
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಉಪ ಕಾರ್ಯದರ್ಶಿಗಳಾದ ನೇಮಕಗೊಂಡು ವರ್ಗಾವಣೆ ಹೊಂದಿರುವ ಹಿನ್ನೆಲೆಯಲ್ಲಿ ಅವರನ್ನು ಜಿಲ್ಲಾಧಿಕಾರಿ ಜೆ. ಮಂಜುನಾಥ, ಜಿಲ್ಲಾ ಪಂಚಾಯತ್‌ ಸಿಇಒ ಡಾ| ಅವಿನಾಶ್‌ ಮೆನನ್‌ ರಾಜೇಂದ್ರನ್‌ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಅವರಿಗೆ ಸನ್ಮಾನಿಸಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ ಅವರು ಮಾತನಾಡಿ, ಅಪರ ಜಿಲ್ಲಾಧಿಕಾರಿಯಾಗಿ ಡಾ| ಬಿ.ಸಿ. ಸತೀಶ್‌ ಅವರು ಉತ್ತಮ ಕೆಲಸ ಮಾಡಿದ್ದಾರೆ. ಅವರ ಸೇವೆ ಇನ್ನು ಈ ಜಿಲ್ಲೆಗೆ ಅವಶ್ಯವಾಗಿತ್ತು. ಆದರೆ ಸಕಾರದ ಸೇವೆಯಲ್ಲಿ ವರ್ಗಾವಣೆ ಸಾಮಾನ್ಯವಾದದ್ದು ಎಂದು ಹೇಳಿ ಅವರಿಗೆ ಶುಭ ಹಾರೈಸಿದರು.

ಸಮಾರಂಭದ ಕೇಂದ್ರ ಬಿಂದುವಾಗಿದ್ದ ಅಪರ ಜಿಲ್ಲಾಧಿಕಾರಿ ಡಾ| ಬಿ.ಸಿ.ಸತೀಶ್‌ ಅವರು ಸನ್ಮಾನವನ್ನು ಸ್ವೀಕರಿಸಿ, ಸರಕಾರಿವೃತ್ತಿಯಲ್ಲಿ ಒಂದೇ ಕಡೇ ಇರುವುದು ಸಾಧ್ಯವಿಲ್ಲ. ಜಿಲ್ಲೆಯಲ್ಲಿ ಇನ್ನೂ ಸಾಕಷ್ಟು ಅಭಿವೃದ್ಧಿ ಆಗಬೇಕಿದೆ. ಹೆಚ್ಚಿನ ಶಿಕ್ಷಣ ಸಂಸ್ಥೆಗಳು ಬರುವುದರಿಂದ ಜಿಲ್ಲೆಯು ಅಭಿವೃದ್ಧಿ ಹಾದಿಯಲ್ಲಿ ಸಾಗಲು ಅನುಕೂಲ ಆಗುತ್ತದೆ ಎಂದು ಅಭಿಪ್ರಾಯ
ವ್ಯಕ್ತಪಡಿಸಿದರು. 

ಯಾವುದೇ ಇಲಾಖೆ ಜನರ ಆಶೋತ್ತರಗಳಿಗೆ ಪೂರಕವಾಗಿ ಸೇವೆ ಸಲ್ಲಿಸಿದಾಗ ಉತ್ತಮ ಹೆಸರು ಬರಲು
ಸಾಧ್ಯ ಆಗುತ್ತದೆ. ಎಲ್ಲರೂ ನಮ್ಮವರು, ನಮ್ಮದು ಎಂದು ಭಾವಿಸಿ ಸಕಾರಾತ್ಮಕವಾಗಿ ಕೆಲಸ ಕಾರ್ಯಗಳನ್ನು ಮಾಡಬೇಕು ಎಂದು ಸಿಬ್ಬಂದಿಗಳಿಗೆ ಸಲಹೆ ನೀಡಿದರು.

Advertisement

ಸಹಾಯಕ ಆಯುಕ್ತರು ಹಾಗೂ ಪ್ರಭಾರಿ ಅಪರ ಜಿಲ್ಲಾಧಿಕಾರಿ ಡಾ| ಜಗದೀಶ್‌ ಕೆ. ನಾಯಕ್‌ ಅವರು ಮಾತನಾಡಿ, ಅಪರ ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ್‌ ಅವರ ಸೇವೆ ಅವಿಸ್ಮರಣೀಯ ಎಂದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಡಾ| ಬಿ.ಸಿ. ಸತೀಶ್‌ ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಾರ್ಯಾಲಯದ ಜವಾನ ತಿಪ್ಪಣ್ಣ ಅವರು ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ
ಅವರನ್ನು ಸಹ ಸನ್ಮಾನಿಸಲಾಯಿತು. ಗುರು ಪಾಟೀಲ ನಿರೂಪಿಸಿರು. ಜಿಲ್ಲಾಧಿಕಾರಿ ಕಾರ್ಯಾಲಯದ ಶಿರಸ್ತೇದಾರ ಅನಿತಾ ಪ್ರಾರ್ಥಿಸಿದರು. ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿ ಮಾರುತಿ ಹುಜರತಿ ಸ್ವಾಗತಿಸಿದರು. ತಹಶೀಲ್ದಾರ ಚನ್ನಮಲ್ಲಪ್ಪ ಘಂಟಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next