Advertisement

ಡಾ|ಶಿವಕುಮಾರ ಸ್ವಾಮೀಜಿಗೆ ‘ಭಾರತ ರತ್ನ’ನೀಡಲು ಆಗ್ರಹ

07:00 AM Jan 19, 2019 | Team Udayavani |

ಕಲಬುರಗಿ: ಶತಾಯುಷಿ, ತುಮಕೂರಿನ ಸಿದ್ಧಗಂಗಾ ಮಠದ ಡಾ| ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪುರಸ್ಕಾರ ನೀಡುವಂತೆ ಒತ್ತಾಯಿಸಿ ಜೈ ಕನ್ನಡಿಗರ ರಕ್ಷಣಾ ವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

Advertisement

ನಡೆದಾಡುವ ದೇವರೆಂದೇ ಖ್ಯಾತರಾಗಿರುವ ಸಿದ್ಧಗಂಗಾ ಶ್ರೀಗಳು ಶಿಕ್ಷಣ, ದಾಸೋಹ ಮತ್ತು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ನಾಡಿನ ತ್ರಿವಿಧ ದಾಸೋಹಿಗಳಾಗಿದ್ದಾರೆ. ಶತಾಯುಷಿಯಾದ ಅವರಿಗೆ ದೇಶದ ಉನ್ನತ ಪ್ರಶಸ್ತಿಯಾದ ಭಾರತ ರತ್ನ ಪುರಸ್ಕಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಿದ್ಧಗಂಗಾ ಶಿಕ್ಷಣ ಸಂಸ್ಥೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುತ್ತಿರುವ ಸ್ವಾಮೀಜಿಗಳು ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸ್ವಾಮೀಜಿಗಳಿಗೆ ಭಾರತರತ್ನ ಪುರಸ್ಕಾರ ನೀಡುವ ಮೂಲಕ ಕೇಂದ್ರ ಸರ್ಕಾರ ಗೌರವಿಸಬೇಕೆಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ವೇದಿಕೆ ಅಧ್ಯಕ್ಷ ಸಚಿನ ಫರಹತಾಬಾದ್‌, ಕಾಶಿನಾಥ ಮಾಳಗೆ, ಅಣವೀರ ಪಾಟೀಲ, ಸುರೇಶ ಹಣಗುಡಿ, ಅಂಬು ಮಸ್ಕಿ, ಅಜಯ ಜಗತ್‌ ಮುಂತಾದವರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next