Advertisement

Kota ಕಾರಂತೋತ್ಸವಕ್ಕೆ ಚಾಲನೆ: ಗಾಂಧೀ ಗ್ರಾಮ ಪ್ರಶಸ್ತಿ ಪುರಸ್ಕೃತರಿಗೆ ಗೌರವಾರ್ಪಣೆ

12:10 AM Oct 04, 2023 | Team Udayavani |

ಕೋಟ: ಕೋಟತಟ್ಟು ಗ್ರಾಮ ಪಂಚಾಯತ್‌, ಕಾರಂತ ಟ್ರಸ್ಟ್‌, ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಒಂದು ವಾರ ಕಾಲ ನಡೆಯಲಿರುವ ಕಾರಂತೋತ್ಸವ, ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಮಂಗಳವಾರ ಕೋಟ ಕಾರಂತ ಕಲಾಭವನದಲ್ಲಿ ಚಾಲನೆ ನೀಡಲಾಯಿತು.

Advertisement

ಕುಂದಾಪುರ ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾರಂತರ ಸಾಧನೆ ಅತ್ಯಂತ ಶ್ರೇಷ್ಠವಾದದ್ದು. ಕಾರಂತ ಕಲಾಭವನದ ಮೂಲಕ ಅವರ ನಿತ್ಯ ಸ್ಮರಣೆ ನಡೆಯುತ್ತಿದೆ ಎಂದರು.

ವಿಧಾನ ಪರಿಷತ್‌ ಸದಸ್ಯ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಸ್ತಾವನೆಗೈದು, ಕಾರಂತ ಹುಟ್ಟೂರು ಪ್ರಶಸ್ತಿ ಮತ್ತು ಅದರ ಜತೆಗಿನ ಕಾರ್ಯಕ್ರಮಗಳನ್ನು ಕಾರಂತೋತ್ಸವದಂತೆ ಜನ ಸಂಭ್ರಮಿಸುತ್ತಿದ್ದಾರೆ. 1 ಕೋಟಿ ರೂ. ಅನುದಾನದಲ್ಲಿ ಕಲಾಭವನದ ಸಭಾಂಗಣವನ್ನು ನವೀಕರಿಸಲಾಗಿದ್ದು, ನಿರಂತರ ಕಾರ್ಯಕ್ರಮ ನಡೆಯಲಿದೆ ಎಂದರು.

ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಕೆ. ಸತೀಶ್‌ ಕುಂದರ್‌ ಅಧ್ಯಕ್ಷತೆ ವಹಿಸಿದ್ದರು.ಉಡುಪಿ ಜಿಲ್ಲೆಯಿಂದ ರಾಜ್ಯಮಟ್ಟದ ಗಾಂಧೀ ಗ್ರಾಮ ಪ್ರಶಸ್ತಿ ಪುರಸ್ಕೃತವಾದ ಕೋಡಿ, ನೀರೆ, ಶಂಕರನಾರಾಯಣ, ಅಲೆವೂರು, ಕಾಲೊ¤àಡು, ಮಡಾಮಕ್ಕಿ, ಬೆಳ್ಳೆ, ಹೊಸಾಡು ಗ್ರಾ.ಪಂ.ಗಳಿಗೆ ಕಾರಂತ ಪ್ರತಿಷ್ಠಾನ ಪುರಸ್ಕಾರ ನೀಡಿ ಗೌರವಿಸಲಾಯಿತು.

ಶಾಸಕರಾದ ಬೈಂದೂರಿನ ಗುರುರಾಜ್‌ ಶೆಟ್ಟಿ ಗಂಟಿಹೊಳೆ, ಕಾಪುವಿನ ಗುರ್ಮೆ ಸುರೇಶ್‌ ಶೆಟ್ಟಿ, ಉಡುಪಿಯ ಯಶ್‌ಪಾಲ್‌ ಎ. ಸುವರ್ಣ, ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ ಸಿ. ಕುಂದರ್‌, ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಬ್ರಹ್ಮಾವರ ತಾ.ಪಂ. ಇ.ಒ. ಇಬ್ರಾಹಿಂಪುರ್‌ ಉಪಸ್ಥಿತರಿದ್ದರು. ಕನ್ನಡ ಸಂಸ್ಕೃತಿ ಇಲಾಖೆ ಜಿಲ್ಲಾ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್‌ ಕೋಟ ಕಾರ್ಯಕ್ರಮ ನಿರೂಪಿಸಿದರು. ಪಿಡಿಒ ರವೀಂದ್ರ ರಾವ್‌ ವಂದಿಸಿದರು.

Advertisement

ರಾಜ್ಯಪಾಲರ ಗೈರು
ಕಾರಂತೋತ್ಸವಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಆಗಮಿಸುವುದು ಎಲ್ಲ ಹಂತಗಳಲ್ಲೂ ಖಾತ್ರಿ ಯಾಗಿತ್ತು. ಆದರೆ ಕೊನೆಘಳಿಗೆ ಯಲ್ಲಿ ಅನಾರೋಗ್ಯ ಕಾರಣದಿಂದ ಭೇಟಿ ರದ್ದಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ನೀರೆ ಗ್ರಾ.ಪಂ.ಗೆ ಡಾ| ಕಾರಂತ ಹುಟ್ಟೂರ ಪ್ರಶಸ್ತಿ ಗೌರವ
ಅಜೆಕಾರು: ರಾಜ್ಯ ಸರಕಾರದ ಪ್ರಸಕ್ತ ಸಾಲಿನ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿರುವ ನೀರೆ ಗ್ರಾಮ ಪಂಚಾಯತ್‌ಗೆ ಕೋಟತಟ್ಟು ಗ್ರಾ.ಪಂ., ಡಾ| ಶಿವರಾಮ ಕಾರಂತ ಟ್ರಸ್ಟ್‌ ಉಡುಪಿ, ಡಾ| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ ವತಿಯಿಂದ ಮಂಗಳವಾರ ಡಾ| ಶಿವರಾಮ ಕಾರಂತ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನೀರೆ ಪಂ. ಅಧ್ಯಕ್ಷ ಸಚ್ಚಿದಾನಂದ ಪ್ರಭು, ಪಿಡಿಒ ಅಂಕಿತಾ ನಾಯಕ್‌, ಉಪಾಧ್ಯಕ್ಷೆ ವಿದ್ಯಾ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು. ಪಂಚಾಯತ್‌ ನಿಕಟ ಪೂರ್ವ ಅಧ್ಯಕ್ಷೆ ಶಾಲಿನಿ, ನಿಕಟಪೂರ್ವ ಉಪಾಧ್ಯಕ್ಷ ಸತೀಶ್‌, ಸದಸ್ಯ ಶಿವಪ್ರಸಾದ್‌ ರಾವ್‌ ಉಪಸ್ಥಿತರಿದ್ದರು.

ಕೋಟ ಶಿವರಾಮ ಕಾರಂತ ಪ್ರತಿಷ್ಠಾನದ ಅಧ್ಯಕ್ಷ ಆನಂದ ಕುಂದರ್‌, ಸಾಹಿತ್ಯ ಪರಿಷತ್‌ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲೆಯ ಎಲ್ಲ ಶಾಸಕರು ಉಪಸ್ಥಿತರಿದ್ದರು. ನೀರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ನೀರೆ ಮತ್ತು ಕಣಜಾರು ಕಂದಾಯ ಗ್ರಾಮಗಳಿದ್ದು 6
ವಾರ್ಡ್‌ಗಳನ್ನು ಹೊಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next