Advertisement

ಆಯುರ್ವೇದದಲ್ಲಿ ಹೆಚ್ಚು ಸಂಶೋಧನೆ ನಡೆಸಿ : ಡಾ। ಸುಧಾಕರ್

02:39 AM Jun 15, 2021 | Team Udayavani |

ಬೆಂಗಳೂರು: ರೋಗ ಬಾರದಂತೆ ತಡೆಯುವ ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಹೆಚ್ಚು ಸಂಶೋ ಧನೆಗಳನ್ನು ನಡೆಸಬೇಕೆಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್‌ ಅವರು ಸಲಹೆ ನೀಡಿದರು.

Advertisement

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾನಿಲಯದ ರಜತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಅಲೋಪಥಿಯಲ್ಲಿ ಸಂಶೋಧನೆಗಳನ್ನು ಮಾಡುವಂತೆ ಆಯುರ್ವೇದದಲ್ಲೂ ಹೆಚ್ಚು ಸಂಶೋಧನೆಗಳು ನಡೆಯಬೇಕು. ಎಷ್ಟೇ ನಂಬಿಕೆ ಇದ್ದರೂ ಅದನ್ನು ಸಾಕ್ಷಿ ಸಮೇತ ನಿರೂಪಿಸಬೇಕು. ಸಂಶೋಧನೆ ಮತ್ತು ಆವಿಷ್ಕಾರವನ್ನು ಹೆಚ್ಚಾಗಿ ಮಾಡಬೇಕು. ಪ್ರತೀ ಮೆಡಿಕಲ್‌ ಕಾಲೇಜುಗಳಲ್ಲಿ ಕೂಡ ಸಂಶೋಧನೆಗಳನ್ನು ಹೆಚ್ಚಿಸಬೇಕಿದೆ. ಸಂಸ್ಥೆಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ಸಂಶೋಧನೆ ಅಗತ್ಯ ಎಂದು ಹೇಳಿದರು.

ಆಕ್ಸ್‌ಫರ್ಡ್‌ ವಿಶ್ವವಿದ್ಯಾನಿಲಯ ಕೋವಿಡ್‌ ಲಸಿಕೆ ತಯಾರಿಸಿದೆ. ಅದೇ ರೀತಿ, ರಾಜೀವ್‌ ಗಾಂಧಿ ವಿವಿ ಕೂಡ ಯಾವುದೇ ರೋಗಗಳಿಗೆ ಪರಿಹಾರ ಕಂಡು ಹಿಡಿಯುವಂತೆ ಸಂಶೋಧನೆ ನಡೆಸಬೇಕು. ಎನ್‌ಸಿಡಿ ಸಮಸ್ಯೆಯಿಂದಾಗಿ ಬಡ ರಾಷ್ಟ್ರಗಳಲ್ಲಿ ವಾರ್ಷಿಕ 28 ದಶಲಕ್ಷ ಜನರು ಮೃತರಾಗುತ್ತಿದ್ದಾರೆ. ಭಾರತದಲ್ಲೂ ಈ ಸಮಸ್ಯೆ ಹೆಚ್ಚಿದೆ. ಈ ರೋಗಗಳಿಗೆ ಆಯುರ್ವೇದ ಪದ್ಧತಿ ಹೆಚ್ಚು ಪರಿಹಾರ ನೀಡುತ್ತದೆ ಎಂದು ತಿಳಿಸಿದರು.

ರಾಜ್ಯಪಾಲರೊಂದಿಗೆ ಚರ್ಚೆ
ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾನಿಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿ ದಂತೆ ಚರ್ಚಿಸಬೇಕಾಗಿತ್ತು. ಆದರೆ ಕೋವಿಡ್‌ನಿಂದಾಗಿ ರಾಜ್ಯಪಾಲರೊಂದಿಗೆ ಚರ್ಚೆ ನಡೆಸಲು ಆಗಿಲ್ಲ. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗಿದೆ ಎಂದರು.

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಕುಲಪತಿ ಸ್ಥಾನ ತುಂಬುವ ಬಗ್ಗೆ ಚರ್ಚಿಸಲಾಗುವುದು. ಈ ಸ್ಥಾನಕ್ಕೆ ಯಾವ ರೀತಿಯ ಸಂಸ್ಕಾರ, ಯಾವ ರೀತಿಯ ಶೈಕ್ಷಣಿಕ ಅರ್ಹತೆ ಇರುವ ಉತ್ತಮರನ್ನು ತರಬೇಕೆಂಬ ವಿಚಾರದಲ್ಲಿ ರಾಜ್ಯ ಸರಕಾರಕ್ಕೆ ಸ್ಪಷ್ಟತೆ ಇದೆ. ಆ ನಿಟ್ಟಿನಲ್ಲಿ ಸ್ಥಾನ ತುಂಬ ಬೇಕೆಂಬುದನ್ನು ರಾಜ್ಯಪಾಲರ ಗಮನಕ್ಕೆ ತರಲಾಗುವುದು ಎಂದರು.

Advertisement

ಕೊರೊನಾ ರ್‍ಯಾಂಡಮ್‌ ಪರೀಕ್ಷೆ
ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣ, ಬಸ್‌ ನಿಲ್ದಾಣ ಸೇರಿ ವಿವಿಧೆಡೆ ರ್‍ಯಾಂಡಮ್‌ ಪರೀಕ್ಷೆ ಮಾಡಬೇಕೆಂದು ಸೂಚಿಸಲಾಗಿದೆ. ಅನ್‌ಲಾಕ್‌ ಹಂತದಲ್ಲೇ ಬಹಳಷ್ಟು ಜನರು ಹೊರಗೆ ಓಡಾಡುತ್ತಿದ್ದಾರೆ. ಜನರು ಮುನ್ನೆ ಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಮಾಲ್‌, ಥಿಯೇಟರ್‌, ಹೊಟೇಲ್‌ ಎಲ್ಲವನ್ನೂ ತೆರೆಯಲು ಅವಕಾಶ ನೀಡಿಲ್ಲ. ಆದರೂ ಕೈಗಾರಿಕೆಗೆ ಅವಕಾಶ ನೀಡಿರುವುದರಿಂದ ಜನರು ಹೊರಗೆ ಓಡಾಡುತ್ತಿರ ಬಹುದು. ಇದಕ್ಕೆ ಪೂರಕವಾಗಿ ಪರೀಕ್ಷೆ ಸಂಖ್ಯೆ ಯನ್ನೂ ಹೆಚ್ಚಿಸಲಾಗುವುದು ಎಂದರು.

ರಾಜ್ಯದಲ್ಲಿ ಕೋವಿಡ್‌ನಿಂದ 25 ಲಕ್ಷಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ. 1.70 ಕೋಟಿ ಕೋವಿಡ್‌ ಲಸಿಕೆ ನೀಡಲಾಗಿದೆ. ಡಿಸೆಂಬರ್‌ ಅಂತ್ಯದ ವೇಳೆಗೆ ಎಲ್ಲರಿಗೂ ಲಸಿಕೆ ನೀಡಲಾಗಿರುತ್ತದೆ ಎಂದು ಅವರು ಹೇಳಿದರು.
**

ಗ್ರಾಮೀಣರಲ್ಲಿ ಲಸಿಕೆ ಕುರಿತ ಗೊಂದಲ ನಿವಾರಣೆಯಾಗಿದೆ
ಚಿಕ್ಕಬಳ್ಳಾಪುರ: ಗ್ರಾಮೀಣ ಪ್ರದೇಶದಲ್ಲಿ ಕೋವಿಡ್‌ ಲಸಿಕೆ ಕುರಿತ ಗೊಂದಲ ನಿವಾರಣೆ ಆಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಲಸಿಕೆ ಪಡೆ ಯಲು ಮುಂದೆ ಬರುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್‌ ಹೇಳಿದ್ದಾರೆ.

ಜಿಲ್ಲೆಯ ಪರೇಸಂದ್ರ, ಆರೂರು ಮತ್ತು ದೊಡ್ಡ ಪೈಲಗುರ್ಕಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಲಸಿಕಾ ಕಾರ್ಯಕ್ರಮದ ಪರಿಶೀಲನೆ, ಸಚಿವರ ನೇತೃತ್ವದ ಶ್ರೀ ಸಾಯಿಕೃಷ್ಣ ಚಾರಿಟಬಲ್‌ ಟ್ರಸ್ಟ್‌ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ 5 ಸಾವಿರ ಆರ್ಥಿಕ ನೆರವು ಮತ್ತು ಉಚಿತ ಆಹಾರ ಸಾಮಗ್ರಿ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿ ಸುದ್ದಿಗಾರ ರೊಂದಿಗೆ ಅವರು ಮಾತನಾಡಿದರು.

ಆರಂಭದಲ್ಲಿ ಎಷ್ಟೇ ಮನವಿ ಮಾಡಿದರೂ ಜನರು ಲಸಿಕೆ ತೆಗೆದುಕೊಳ್ಳಲು ಬರುತ್ತಿರಲಿಲ್ಲ. ಕಳೆದ ಮೂರ್ನಾಲ್ಕು ತಿಂಗಳು ಸತತವಾಗಿ ಅರಿವು ಮೂಡಿಸುವ ಕೆಲಸ ಮಾಡಿ ಅವರಲ್ಲಿನ ಸಂಶಯ ಗಳನ್ನು ನಿವಾರಿಸುವ ಪ್ರಯತ್ನ ನಡೆಸಲಾಯಿತು. ಕೋವಿಡ್‌ ರೋಗದಿಂದ ಪಾರಾಗಲು ಲಸಿಕೆ ಯೊಂದೇ ಪರಿಹಾರ ಎಂಬುದು ಮನವರಿಕೆ ಆಗಿದೆ. ಈಗ ಎಲ್ಲೆಡೆ ಗ್ರಾಮಾಂತರ ಪ್ರದೇಶಗಳಲ್ಲಿ ಜನರು ಸ್ವಯಂ ಪ್ರೇರಿತರಾಗಿ ಬಂದು ಲಸಿಕೆ ಪಡೆದುಕೊಳ್ಳುತ್ತಿದ್ದಾರೆ. ಇದು ಸಮಾಧಾನಕರ ಸಂಗತಿ ಎಂದರು.
ದೇಶಾದ್ಯಂತ ಲಸಿಕಾ ಕಾರ್ಯಕ್ರಮ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಈಗ ಲಸಿಕೆ ನೀಡುತ್ತಿರುವ ವೇಗವನ್ನು ಗಮನಿಸಿದರೆ ಇತರ ಎಲ್ಲ ದೇಶಗಳಿಗಿಂತ ಭಾರತ ವೇಗವಾಗಿ ಎಲ ಜನರಿಗೆ ಲಸಿಕೆ ನೀಡುವ ಸಾಧ್ಯತೆಗಳಿವೆ. ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಂಡು ಲಸಿಕೆ ಪಡೆದು ಕೋವಿಡ್‌ ಹಿಮ್ಮೆಟ್ಟಿಸುವ ಕಾರ್ಯದಲ್ಲಿ ಸರಕಾರದ ಜತೆ ಕೈ ಜೋಡಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ಸಿಎಂ ದೃಢ ನಿರ್ಧಾರ
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಕೋವಿಡ್‌ನಿಂದ ಮೃತಪಟ್ಟಿರುವವರಿಗೆ ಪರಿಹಾರ ರೂಪದಲ್ಲಿ ಒಂದು ಲಕ್ಷ ರೂ. ನೀಡುವ ನಿರ್ಧಾರ ಸರಕಾರದ ಇಚ್ಛಾಶಕ್ತಿಯನ್ನು ತೋರಿಸುತ್ತದೆ. ಸಂಕಷ್ಟ ಸಂದರ್ಭದಲ್ಲಿ ಜನರ ಜತೆ ಸರಕಾರ ಇರಬೇಕು. ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ನಿಜಕ್ಕೂ ಇದೊಂದು ಶ್ಲಾಘನೀಯ ಕ್ರಮ ಎಂದರು.

ತಲಾ 1ಲಕ್ಷ ರೂ
ಚಿಕ್ಕಬಳ್ಳಾಪುರಕ್ಕೆ ಸಂಬಂಧಿಸಿದಂತೆ ತಮ್ಮ ನೇತೃತ್ವದ ಶ್ರೀ ಸಾಯಿ ಕೃಷ್ಣ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದಲೂ ಕೋವಿಡ್‌ನಿಂದ ಮೃತಪಟ್ಟ ವರ ಕುಟುಂಬಗಳಿಗೆ ತಲಾ 1ಲಕ್ಷ ರೂ.ನೀಡುವು ದಾಗಿ ಈಗಾಗಲೇ ಪ್ರಕಟಿಸಿ ವಿತರಣೆ ಮಾಡಲಾ ಗುತ್ತಿದೆ ಎಂದೂ ಅವರು ಸ್ಪಷ್ಟಪಡಿಸಿದರು.

ಶ್ಲಾಘನೀಯ ಕಾರ್ಯ
ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಕಾರ್ಯಕರ್ತರ ಪಾತ್ರ ಅದರ ಲ್ಲಿಯೂ ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ. ಇಡೀ ರಾಜ್ಯದ ಜನರೇ ಅವರ ಕೆಲಸ ವನ್ನು ಮೆಚ್ಚಿದೆ. ಈ ಕಾರಣದಿಂದಲೇ ಸರಕಾರ ಅವರಿಗೆ ಹೆಚ್ಚುವರಿಯಾಗಿ 3 ಸಾವಿರ ರೂ. ನೀಡುತ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತಮ್ಮ ಟ್ರಸ್ಟ್‌ ವತಿಯಿಂದ ಈಗಾಗಲೇ ಮಂಚೇನಹಳ್ಳಿ ತಾಲೂ ಕಿನಲ್ಲಿ ಉಚಿತ ಆಹಾರ ಧಾನ್ಯದ ಜತೆ ತಲಾ 5 ಸಾವಿರ ರೂ.ಗಳನ್ನು ನೀಡಲಾಗುತ್ತಿದೆ. ಅದನ್ನು ಮಂಡಿಕಲ್ಲು ಭಾಗದಲ್ಲಿರುವ 44 ಮಂದಿಗೂ ವಿಸ್ತರಿಸಲಾಗುವುದು ಎಂದೂ ಸಚಿವರು ತಿಳಿಸಿ ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next