Advertisement

ಮಹಿಳೆಯರು ಅಬಲೆಯರಲ್ಲ ಸಬಲೆಯರು : ಡಾ. ಕೆ. ಸುಧಾಕರ್‌

07:15 PM Mar 08, 2022 | Team Udayavani |

ಬೆಂಗಳೂರು: ಮಹಿಳೆಯರಿಗೆ ಆಡಳಿತ ಸೇರಿದಂತೆ ಎಲ್ಲ ವಿಭಾಗಗಳಲ್ಲೂ ಹೆಚ್ಚಿನ ಸ್ಥಾನಮಾನ ಸಿಕ್ಕಿದಾಗ ಮಾತ್ರ ಮಹಿಳಾ ಸಬಲೀಕರಣವಾದಾಗ ಮಾತ್ರ ದೇಶ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ತಿಳಿಸಿದರು.

Advertisement

ವಾಣಿ ವಿಲಾಸ ಆಸ್ಪತ್ರೆಯಲ್ಲಿ ಹ್ಯೂಮನ್‌ ಮಿಲ್ಕ್ ಬ್ಯಾಂಕ್‌ ಮತ್ತು ಹೈ ರಿಸ್ಕ್ ಪ್ರೆಗ್ನೆನ್ಸಿ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಒಟ್ಟು 4 ಕಡೆ ಎದೆ ಹಾಲು ಸಂಗ್ರಹಿಸುವ ಕೇಂದ್ರವಿದೆ. ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ವ್ಯವಸ್ಥೆ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಸಿಗಲಿದೆ. ಈ ಮೂಲಕ ಅನೇಕ ಮಕ್ಕಳಿಗೆ ಸಹಾಯವಾಗಲಿದೆ ಎಂದು ಹೇಳಿದರು.

ವಾಣಿ ವಿಲಾಸ್‌ ಆಸ್ಪತ್ರೆಯಲ್ಲಿ 72 ಹಾಸಿಗೆಯ ಹೈರಿಸ್ಕ್ ಪ್ರಗ್ನನ್ಸಿ ಕಟ್ಟಡದ ಮಹಡಿಯಲ್ಲಿ ಸುಮಾರು 28 ಹಾಸಿಗೆಗಳನ್ನು ಎನ್‌ಐಸಿಯು, 22 ಹಾಸಿಗೆಯ ಪಿಡಿಯಾಟ್ರಿಕ್‌ ಐ.ಸಿ.ಯು, 22 ಹಾಸಿಗೆಯ ಎಂ.ಐ.ಸಿ.ಯು. ಇದೆ. ಬಿಎಂಆರ್‌ಸಿಎಲ್‌, ಕೆಎಚ್‌ಎಸ್‌ಡಿಪಿ ಹಾಗೂ ಬೆಂಗಳೂರು ಸ್ಮಾರ್ಟ್‌ ಸಿಟಿ ಯೋಜನೆ ಕೈ ಜೋಡಿಸಿವೆ ಎಂದರು.

ಬೇರೆ ಇಲಾಖೆಗಳಲ್ಲಿ ಐಎಎಸ್‌, ಕೆಎಎಸ್‌ ಅಧಿಕಾರಿಗಳು ಆಡಳಿತದ ಅನುಭವ ಪಡೆದಿರುತ್ತಾರೆ. ಆದರೆ ಆರೋಗ್ಯ ಇಲಾಖೆಯಲ್ಲಿ ಸ್ನಾತಕೋತ್ತರ ಪದವಿ ಪಡೆದ ವೈದ್ಯರೇ ಇರುತ್ತಾರೆ. ಅವರಿಗೆ ಆಡಳಿತದ ತರಬೇತಿ ನೀಡುವ ಕೆಲಸವಾಗುತ್ತಿದೆ. ವೈದ್ಯರು ಮನೆ-ಮನೆಗೂ ಹೋಗಿ ಲಸಿಕೆ ನೀಡಿದ್ದಾರೆ. ಕೋವಿಡ್‌ ಅನಂತರದಲ್ಲಿ ಆರೋಗ್ಯ ವ್ಯವಸ್ಥೆಯಲ್ಲಿ ಬದಲಾವಣೆ ಆಗಿದೆ. ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಒತ್ತು ಕೊಟ್ಟಿದೆ ಎಂದು ಹೇಳಿದರು.

ಇದನ್ನೂ ಓದಿ : ದೇಶದ ಮಹಿಳಾ ಸಬಲೀಕರಣಕ್ಕೆ ಬಲ ತುಂಬುತ್ತಿರುವ ಸಿಎಸ್‌ಸಿಇ ಕೇಂದ್ರಗಳು: ಶಶಿಕಲಾ ಜೊಲ್ಲೆ

Advertisement

ಕೋವಿಡ್‌ ಸಮಯದಲ್ಲಿ ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರ ಸೇವೆ ಮರೆಯಲು ಸಾಧ್ಯವಿಲ್ಲ. ತಮ್ಮ ಆರೋಗ್ಯವನ್ನು ಲೆಕ್ಕಿಸದೆ, ಮನೆ ಮನೆಗೆ ಹೋಗಿ ಆರೈಕೆ ಮಾಡಿ, ಮಾರ್ಗದರ್ಶನ ನೀಡಿ ಮೆಚ್ಚುಗೆ ಗಳಿಸಿದ್ದಾರೆ. ಸರ್ಕಾರ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಳ ಮಾಡಿದೆ. ಸಮರ್ಥ ಭಾರತದ ನಿರ್ಮಾಣವಾಗಬೇಕು. ಅದಕ್ಕೆ ಸಮೃದ್ಧ, ಹಾಗೂ ಸ್ವಸ್ಥ ಕರ್ನಾಟಕದ ಮೂಲಕ ನವಭಾರತ ನಿರ್ಮಾಣವಾಗಬೇಕು ಎಂದು ತಿಳಿಸಿದರು. ಸಂಸದ ಪಿ.ಸಿ.ಮೋಹನ್‌ ಸೇರಿ ಹಲವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next