Advertisement
ಇಡೀ ದೇಶದಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇರಳ ಮೂರನೇ ಸ್ಥಾನದಲ್ಲಿದ್ದು, ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಳಿಗೆಗಳನ್ನು ತೆರೆಯಲು ಸರ್ಕಾರ ಕಾರ್ನೋನ್ಮುಖವಾಗಿದೆ ಎಂದು ಅವರು ತಿಳಿಸಿದ್ದಾರೆ.
Related Articles
Advertisement
ರಾಜ್ಯದಲ್ಲಿ ಜನರಿಕ್ ಔಷಧಿಗಳು ಬ್ರಾಂಡೆಡ್ ಆಗಿದ್ದು, ಮಾರುಕಟ್ಟೆಗಿಂತ ಶೇ.50 ರಿಂದ 80 ರಷ್ಟು ಅಗ್ಗದ ದರದಲ್ಲಿ ದೊರೆಯುತ್ತಿವೆ. ಎನ್.ಎ.ಬಿ.ಎಲ್ ಪ್ರಯೋಗಾಲಯದಲ್ಲಿ ಜನೌಷಧಿ ಮಳಿಗೆಗಳನ್ನು ಪರೀಕ್ಷಿಸಿ ಸಾರ್ವಜನಿಕ ಉಪಯೋಗಕ್ಕೆ ಜನೌಷಧಿ ಕೇಂದ್ರಗಳಲ್ಲಿ ದೊರೆಯುವಂತೆ ಮಾಡಲಾಗುತ್ತಿದೆ. ಒಟ್ಟು 1451 ಔಷಧಗಳು ಮತ್ತು 240 ಶಸ್ತ್ರಚಿಕಿತ್ಸೆ ಪರಿಕರಗಳು, ದುಬಾರಿ ವೆಚ್ಚದ ಕ್ಯಾನ್ಸರ್ ಔಷಧಗಳು ಸಹ ಇಲ್ಲಿ ದೊರೆಯುತ್ತಿವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ಪ್ರಾರಂಭಿಸಲು ಉದ್ದೇಶ ಹೊಂದಿರುವ ಫಾರ್ಮಸಿ ಪದವಿಧರರಿಂದ ಮಳಿಗೆಗಳನ್ನು ತೆರೆಯಲು ಹೆಚ್ಚಿನ ಬೇಡಿಕೆ ಬರುತ್ತಿದೆ. ಸ್ವಾಯತ್ತ ಸಂಸ್ಥೆಗಳಿಗೆ 120 ಚದರ ಅಡಿ ಸ್ಥಳವನ್ನು ಉಚಿತವಾಗಿ ನೀಡಲಾಗುತ್ತಿದೆ. ಬ್ಯೂರೋ ಆಫ್ ಫಾರ್ಮಸಿ ಪಬ್ಲಿಕ್ ಸೆಕ್ಟರ್ ಯೂನಿಟ್ಸ್ ಆಫ್ ಇಂಡಿಯಾ [ಬಿಪಿಪಿಐ] ಪ್ರತಿಯೊಂದು ಜನೌಷಧಿ ಮಳಿಗೆ ಪ್ರಾರಂಭಿಸಲು ಜನೌಷಧಿ ಮಳಿಗೆ ತೆರೆಯುವ ಪ್ರತಿ ಮಳಿಗೆಗೆ ಬಿಪಿಪಿಐಯಿಂದ ಮಾಸಿಕ ಖರೀದಿಗಾಗಿ ವಹಿವಾಟಿಗೆ ತಕ್ಕಂತೆ ಮಾಸಿಕ ಶೇ 15 ರಂತೆ ಮಾಸಿಕ 15,000 ರೂ ಗಳನ್ನು ಮೀರದಂತೆ ಒಟ್ಟಾರೆ ರೂ 2.50 ಲಕ್ಷಗಳವರೆಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ ಎಂದೂ ಅವರು ತಿಳಿಸಿದ್ದಾರೆ.
“ಜನೌಷಧಿ ಮಳಿಗೆಗಳಿಂದ ಬಿಪಿಎಲ್ ಮತ್ತು ಬಡ ವರ್ಗದವರಿಗೆ ಹೆಚ್ಚಿನ ಅನುಕೂಲವಾಗುತ್ತಿದ್ದು, ಆರೋಗ್ಯಕ್ಕಾಗಿ ಮಾಡುತ್ತಿರುವ ವೆಚ್ಚ ಗಣನೀಯವಾಗಿ ಕಡಿಮೆಯಾಗುತ್ತಿದೆ. ಮತ್ತಷ್ಟು ಮಳಿಗೆಗಳನ್ನು ತೆರೆದು ಜನರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಈ ವರ್ಷ 300 ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ಉತ್ತಮ ಸಾಧನೆ ಮಾಡಿದ್ದೇವೆ”
– ಡಾ. ಕೆ. ಸುಧಾಕರ್, ಸಚಿವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ