Advertisement

ಡಾ|ಹೆಗ್ಗಡೆಗೆ ಪೆನ್ಸಿಲ್ವೇನಿಯಾ ವಿ.ವಿ. ಗೌರವ

03:45 AM Jan 06, 2017 | Team Udayavani |

ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಹಾಗೂ ಮಹಿಳಾ ಸಶಕ್ತೀಕರಣ ಕ್ಷೇತ್ರದಲ್ಲಿ ಮಾಡಿರುವ ವಿಶೇಷ ಸಾಧನೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಅಮೆರಿಕದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯ (ಯು ಪೆನ್‌)ವು “ಔಟ್‌ಸ್ಟಾಂಡಿಂಗ್‌ ಲೀಡರ್‌ಶಿಪ್‌ ಇನ್‌ ರೂರಲ್‌ ಡೆವಲಪ್‌ಮೆಂಟ್‌ ಆ್ಯಂಡ್‌ ವಿಮೆನ್‌ ಎಂಪವರ್‌ವೆುಂಟ್‌’ ಪ್ರಶಸ್ತಿಯನ್ನು ನೀಡಿ ಸಮ್ಮಾನಿಸಿದೆ.

Advertisement

ಪೆನ್ಸಿಲ್ವೇನಿಯಾ ವಿವಿಯ ಪ್ರೊ| ಫೆಮಿಡಾ ಹ್ಯಾಂಡಿ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ ಹೆಗ್ಗಡೆ ಅವರನ್ನು ಸಮ್ಮಾನಿಸಿ ಫಲಕ ಪ್ರದಾನ ಮಾಡಿದರು.

ಮಾಹಿತಿ ವಿನಿಮಯ: ವಿ.ವಿ. 9 ವಿದ್ಯಾರ್ಥಿಗಳನ್ನೊಳಗೊಂಡ ತಂಡ 2 ದಿನಗಳ ಕಾಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ವಿಶೇಷ ಅಧ್ಯಯನಕ್ಕಾಗಿ ಆಗಮಿಸಿದ್ದು ಂåೋಜನೆಯ ಅಧ್ಯಕ್ಷ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿತು. ಗ್ರಾಮೀಣಾಭಿವೃದ್ಧಿ, ಮಹಿಳಾ ಸಶಕ್ತೀಕರಣ ಹಾಗೂ ಬದಲಿ ಇಂಧನ ಕ್ಷೇತ್ರದಲ್ಲಿ ಂåೋಜನೆಯ ಅನುಭವವನ್ನು ಡಾ| ಹೆಗ್ಗಡೆ ತಂಡದೊಂದಿಗೆ ಹಂಚಿಕೊಂಡರು.

ಂåೋಜನೆಯ ಕೇಂದ್ರ ಕಚೆೇರಿಗೆ ಭೇಟಿ ನೀಡಿದ ತಂಡಕ್ಕೆ ಮಾನವ ಸಂಪದ ವಿಭಾಗದ ನಿರ್ದೇಶಕಿ ಮಮತಾ ಹರೀಶ್‌ ರಾವ್‌ ಸಂಸ್ಥೆಯ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಕೇಂದ್ರ ಕಚೇರಿ ಹಾಗೂ ಉತ್ಪಾದನಾ ಘಟಕ, ಮಾರಾಟ ಮಳಿಗೆಗೆ ಈ ತಂಡ ಭೇಟಿ ನೀಡಿತು. 

ಸಿರಿ ನಿರ್ದೇಶಕಿ ಮನೋರಮಾ ಭಟ್‌, ಪ್ರಾಂಶುಪಾಲ ಸುರೇಶ್‌ ಸಾಲಿಯಾನ್‌ ಉಪನ್ಯಾಸಕ ವಸಂತ ನಾಯಕ್‌ ಉಪಸ್ಥಿತರಿದ್ದರು.

Advertisement

ನಿಟ್ಟೆ ಹಾಗೂ ಪೆನ್ಸಿಲ್ವೇನಿಯಾ ವಿ.ವಿ. ವಿದ್ಯಾರ್ಥಿ ವಿನಿಮಯ ಯೋಜನೆಯಡಿ ಭಾರತಕ್ಕೆ ಆಗಮಿಸಿದ ಈ ತಂಡ 11 ದಿನಗಳ ಕಾಲ ನಿಟ್ಟೆಯ ಪ್ರೊ| ವಿನೋದ್‌ ದೀಕ್ಷಿತ್‌ ನೇತೃತ್ವದಲ್ಲಿ ಅಧ್ಯಯನ ನಡೆಸಲಿದೆ.

Advertisement

Udayavani is now on Telegram. Click here to join our channel and stay updated with the latest news.

Next