Advertisement

Kota; ಕಾರಂತ ಹುಟ್ಟೂರ ಪ್ರಶಸ್ತಿಗೆ ಡಾ.ವಿದ್ಯಾಭೂಷಣ್ ಆಯ್ಕೆ

01:56 PM Sep 09, 2023 | Team Udayavani |

ಕೋಟ: ಕೋಟತಟ್ಟು ಗ್ರಾ.ಪಂ., ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ ಆಶ್ರಯದಲ್ಲಿ ಕೊಡಮಾಡುವ 2023ನೇ ಸಾಲಿನ ಪ್ರತಿಷ್ಠಿತ ಡಾ| ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಖ್ಯಾತ ಶಾಸ್ತ್ರೀಯ ಸಂಗೀತಗಾರ ಡಾ. ವಿದ್ಯಾಭೂಷಣ್ ಅವರನ್ನು ಆಯ್ಕೆ ಮಾಡಲಾಗಿದೆ.

Advertisement

ಡಾ.ವಿದ್ಯಾಭೂಷಣ್ ಅವರು ಹಲವು ದಶಕಗಳಿಂದ ಸಂಗೀತ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು,  ಅ.10ರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನದಂದು ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದು ಕಾರಂತ ಪ್ರತಿಷ್ಠಾನದ ಗೌರವಾಧ್ಯಕ್ಷ ಆನಂದ ಸಿ.ಕುಂದರ್ ತಿಳಿಸಿದ್ದಾರೆ.

ಕಳೆದ ಹದಿನೆಂಟು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದ್ದು, ಈಗಾಗಲೇ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ | ಬಿ. ಎಂ ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ, ಗಿರೀಶ್ ಭಾರದ್ವಜ್, ರಮೇಶ್ ಅರವಿಂದ್ ಅವರಿಗೆ ಇದುವರೆಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಕೆ.ಸತೀಶ್ ಕುಂದರ್, ಆಯ್ಕೆ ಸಮಿತಿ ಸದಸ್ಯ  ಯು.ಎಸ್ ಶೆಣೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಪಿ.ಡಿ.ಓ ರವೀಂದ್ರ ರಾವ್ , ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ  ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next