Advertisement

Dr.Vishnuvardhan; ಇಂದು ಸಾಹಸಸಿಂಹ ಬರ್ತ್‌ಡೇ

10:14 AM Sep 18, 2023 | Team Udayavani |

ಇಂದು ನಟ ಸಾಹಸಸಿಂಹ ಡಾ. ವಿಷ್ಣುವರ್ಧನ್‌ ಅವರ ಜನ್ಮದಿನ. ಈ ವರ್ಷದ ಹುಟ್ಟುಹಬ್ಬ ಹೆಚ್ಚು ವಿಶೇಷ. ಅದಕ್ಕೆ ಕಾರಣ ಇದು ವಿಷ್ಣುವರ್ಧನ್‌ ಅವರ 73ನೇ ಹುಟ್ಟುಹಬ್ಬ. ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ವಿಷ್ಣುದಾದ ಅಭಿಮಾನಿಗಳು ನಿರ್ಧರಿಸಿದ್ದಾರೆ. ಸಾಕಷ್ಟು ಕಾರ್ಯಕ್ರಮಗಳನ್ನು ಈಗಾಗಲೇ ಹಮ್ಮಿಕೊಂಡಿದ್ದಾರೆ.

Advertisement

ಪ್ರೀತಿ, ಒಂಚೂರು ಸಿಟ್ಟು, ಅಪಾರ ವಿನಯ, ಕಿಂಚಿತ್‌ ಸಂಕೋಚ, ಮುಚ್ಚುಮರೆಯಿಲ್ಲದ ಮಾತು, ಮನಗೆಲ್ಲುವ ಮಂದಹಾಸ- ಇವೆಲ್ಲದರ ಮೊತ್ತವಾಗಿದ್ದವರು ವಿಷ್ಣುವರ್ಧನ್‌. ಸಂಪತ್‌ ಕುಮಾರ್‌ ಆಗಿ ಚಿತ್ರರಂಗಕ್ಕೆ ಬಂದು “ವಂಶವೃಕ್ಷ’ದಲ್ಲಿ ಪುಟ್ಟ ಪಾತ್ರ ಮಾಡಿ, ರಾಮಾಚಾರಿಯಾಗಿ ಎದ್ದು ನಿಂತ ವಿಷ್ಣುವರ್ಧನ್‌ ಮತ್ತೆ ತಿರುಗಿ ನೋಡಲಿಲ್ಲ. ಇನ್ನೂರು ಚಿತ್ರಗಳ ಗಡಿ ದಾಟಿದ ವಿಷ್ಣುವರ್ಧನ್‌ ಚಾರಿತ್ರಿಕ, ಪೌರಾಣಿಕ, ಸಾಮಾಜಿಕ ಪಾತ್ರಗಳಲ್ಲಿ ನಟಿಸಿ ಗೆದ್ದವರು. ಬಲಗೈಲಿ ಕೊಟ್ಟದ್ದು ಎಡಗೈಗೆ ತಿಳಿಯಬಾರದು ಎಂಬಂತಿದ್ದವರು ವಿಷ್ಣು …

ಯಾವತ್ತೂ ಅವರು ತಾವು ಮಾಡಿದ ಸಹಾಯದ ಕುರಿತು ಹೇಳಿಕೊಂಡವರೇ ಅಲ್ಲ. ವಿವಾದಗಳು ಅವರನ್ನು ಬೆನ್ನಟ್ಟಿ ಬಂದಾಗಲೂ ವಿಷ್ಣು ಮೌನಿಯಾಗಿದ್ದರು. ಅಂಬರೀಷ್‌ ಮತ್ತು ಅವರ ಸ್ನೇಹ ಚಿತ್ರರಂಗಕ್ಕೊಂದು ಮಾದರಿ ಎಂಬಂತಿತ್ತು. ವಿಷ್ಣುವರ್ಧನ್‌ ನಟಿಸಿದ ಚಿತ್ರಗಳ ಪೈಕಿ ನೆನಪಲ್ಲಿ ಉಳಿಯುವಂಥ ಚಿತ್ರಗಳ ಪಟ್ಟಿ ಸಾಕಷ್ಟು ದೊಡ್ಡದಿದೆ.

ನಟಿ ಶ್ರುತಿ ಬರ್ತ್‌ಡೇ: ವಿಭಿನ್ನ ಪಾತ್ರಗಳ ಮೂಲಕ ಜನಮನ ಗೆದ್ದಿರುವ ನಟಿ ಶ್ರುತಿ ಅವರಿಗೂ ಇಂದು ಹುಟ್ಟುಹಬ್ಬದ ಸಂಭ್ರಮ.

Advertisement

Udayavani is now on Telegram. Click here to join our channel and stay updated with the latest news.

Next