Advertisement

ಡಾ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ : ಅಭಿಮಾನಿಗಳ ಭಾವನೆಗಳಿಗೆ ಸಕಾರಾತ್ಮಕ ಸ್ಪಂದನೆ: ಸಿಎಂ

04:33 PM Jan 29, 2023 | Team Udayavani |

ಮೈಸೂರು: ಡಾ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಅಭಿಮಾನಿಗಳ ಒತ್ತಾಯವಾಗಿದೆ ರಾಜ್ಯ ಸರ್ಕಾರ ಮುಂದಿನ‌ ದಿನಗಳಲ್ಲಿ ಅವರ ಭಾವನೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದರು .

Advertisement

ಮೈಸೂರು ನಗರದ ಹೊರವಲಯದಲ್ಲಿರುವ ಹಾಲಾಳು ಗ್ರಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಡಾ. ವಿಷ್ಣುವರ್ಧನ್ ಪ್ರತಿಷ್ಠಾನದ ವತಿಯಿಂದ ನಿರ್ಮಿಸಿರುವ ಡಾ ವಿಷ್ಣುವರ್ಧನ್ ಸ್ಮಾರಕ ಭವನ ಉದ್ಘಾಟಿಸಿ ಮಾತನಾಡಿದರು.

ಡಾ ವಿಷ್ಣುವರ್ಧನ್ ಇಡೀ ಕರುನಾಡು ‌ಮೆಚ್ಚಿದ ಹೃದಯವಂತ, ತಮ್ಮ ಅಭಿನಯದಿಂದಲೇ ಜನಮನ ಗೆದ್ದ ಅಪ್ರತಿಮ ನಟ ಎಂದು ಮುಖ್ಯಮಂತ್ರಿ ತಿಳಿಸಿದರು.

ನಾಗರಹಾವು ಸಿನಿಮಾದ ರಾಮಾಚಾರಿ ಪಾತ್ರದ ಮೂಲಕ ಎಲ್ಲರ ಮನೆ ಮಾತಾದ ಡಾ ವಿಷ್ಣುವರ್ಧನ್ ಯಾವುದೇ ಪಾತ್ರಕ್ಕೂ ಸೈ ಎನ್ನವಂತೆ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಡಾ ವಿಷ್ಣುವರ್ಧನ್ ಅವರಿಗೆ ಜೀವನದಲ್ಲಿ ಜೊತೆಯಾಗಿ,ಶಕ್ತಿ ಯಾಗಿ ನಿಂತಿದ್ದ ಪದ್ಮಶ್ರೀ ಭಾರತಿ ಅವರು ವಿಷ್ಣುವರ್ಧನ್ ಅವರು ಜನಿಸಿದ ಮೈಸೂರಿನಲ್ಲೇ ಸ್ಮಾರಕ ನಿರ್ಮಾಣ ಮಾಡಬೇಂದು ಹಂಬಲಿಸಿ ,ಪರಿಶ್ರಮ ವಹಿಸಿ ಸ್ಮಾರಕ ನಿರ್ಮಾಣ ಮಾಡಿಸಿದ್ದಾರೆ .ಈ ಭವ್ಯ ಸ್ಮಾರಕದಲ್ಲಿ ಎಲ್ಲಾ ಸೌಲಭ್ಯ ಇದೆ ಸಾರ್ವಜನಿಕರು ಹಾಗೂ ಚಿತ್ರ ರಂಗ ಇದರ ಅನುಕೂಲ ಪಡೆದುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು‌.

ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಟಿ ದೇವೇಗೌಡ, ಭಾರತಿ ವಿಷ್ಣುವರ್ಧನ್, ಅನಿರುದ್ಧ ಜಟ್ಕರ್ ಅವರು ಮಾತನಾಡಿದರು.

Advertisement

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಡಾ .ಪಿ ಹರ್ಷ ಅವರು ಪ್ರಸ್ತಾವಿಕವಾಗಿ ಮಾತನಾಡಿ ಡಾ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣದ ಹಿನ್ನಲೆ ,ಸ್ವರೂಪ ಇರುವ ಸೌಲಭ್ಯಗಳ ಬಗ್ಗೆ ವಿವರಿಸಿದರು.

ಸಂಸದ ಪ್ರತಾಪ್ ಸಿಂಹ ,ಶಾಸಕರಾದ ರಾಮದಾಸ್, ನಾಗೇಂದ್ರ ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ವಿವಿಧ ಜನ ಪ್ರತಿನಿಧಿಗಳು ಹಾಜರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next