Advertisement
ಈ ಪರಿಸರದಲ್ಲಿನ ವಸತಿ ಸಮುಚ್ಚಯ ಗಳಲ್ಲಿ ಹಲವಾರು ಕುಟುಂಬಗಳು ವಾಸ ಮಾಡುತ್ತಿದ್ದು, ಅನಾರೋಗ್ಯ ಭೀತಿ ಕಾಡು ತ್ತಿದೆ. ರಸ್ತೆ ಮೇಲೆ, ಆಸುಪಾಸಿನ ಸ್ಥಳಗಳಲ್ಲಿ ಕೊಳಚೆ ನೀರು ತುಂಬಿ ಹರಿಯುತ್ತಿದೆ. ಇದರಿಂದ ಸ್ಥಳೀಯರಿಗೆ ಸಾಕಷ್ಟು ತೊಂದರೆ ಯಾಗುತ್ತಿದ್ದು, ದುರ್ವಾಸನೆ, ಕ್ರಿಮಿ ಕೀಟಗಳ ಹಾವಳಿಯಿಂದ ರೋಗಭೀತಿ ಕಾಡುತ್ತಿದೆ. ಪರಿಸರದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎನ್ನುತ್ತಾರೆ ಸ್ಥಳೀಯರು.
ಈ ಹಿಂದೆಯೂ ಹಲವು ಬಾರಿ ಇಲ್ಲಿ ಒಳಚರಂಡಿ ಅವ್ಯವಸ್ಥೆಯಿಂದ ಪರಿಸರ ದಲ್ಲಿ ನಡೆದಾಡಲು ಆಗದಂತಹ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಇದೀಗ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಇಲ್ಲಿನ ಸ್ಥಳೀಯರು ಆಗ್ರಹಿಸಿದ್ದಾರೆ. ದುರಸ್ತಿಗೆ ಕ್ರಮ
ನಗರದಲ್ಲಿ ಯುಜಿಡಿ ಕಾಮಗಾರಿ ನಡೆಯುತ್ತಿದೆ. ಗುಂಡಿಬೈಲು ಬಳಿಯ ಒಳಚರಂಡಿ ಸಮಸ್ಯೆ ಬಗ್ಗೆ ಪರಿಶೀಲಿಸಿ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು.
-ಮೋಹನ್‌ರಾಜ್,
ಎಇಇ, ಉಡುಪಿ ನಗರಸಭೆ
Related Articles
Advertisement