Advertisement

ಕಾಂಗ್ರೆಸ್ ನಾಯಕರಿಂದ ಪ್ರಚಾರಕ್ಕಾಗಿ ಡ್ರಾಮಾ ಆರಂಭ: ಸಚಿವ ಶ್ರೀರಾಮುಲು

11:09 AM Feb 18, 2023 | Team Udayavani |

ಬಳ್ಳಾರಿ: ವಿಪಕ್ಷ ನಾಯಕರು ಬಜೆಟ್ ವೇಳೆ ಕಿವಿಯಲ್ಲಿ ಹೂ ಇಟ್ಟುಕೊಂಡು ಬಂದಿದ್ದರು. ಶಿಷ್ಟಾಚಾರ ಪಾಲಿಸದೆ ಅಗೌರವ ತೋರಿಸುವ ಕೆಲಸ ಕಾಂಗ್ರೆಸ್ ಮಾಡಿದೆ. ಕಾಂಗ್ರೆಸ್ ನಾಯಕರು ಪ್ರಚಾರಕ್ಕಾಗಿ ಡ್ರಾಮಾ ಆರಂಭಿಸಿದ್ದು, ಅದೊಂದು ಡ್ರಾಮಾ ಕಂಪನಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಹೇಳಿದರು.

Advertisement

ಸುದ್ದಿಗೋಷ್ಟಿಯಯಲ್ಲಿ ಮಾತನಾಡಿದ ಅವರು, ಬಜೆಟ್ ಜನರಿಗೆ ತಲುಪದಂತೆ ಮಾಡಬೇಕೆಂದು ಕಾಂಗ್ರೆಸ್ ಈ ರೀತಿ ಮಾಡಿದೆ. ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ದೂರದೃಷ್ಟಿ ಹೊಂದಿರುವ ಬಜೆಟ್, ಜನ ಸಾಮಾನ್ಯರ ನಾಡಿ ಮಿಡಿತ ಅರಿತು ಮಂಡಿಸಲಾಗಿದೆ. ನವಕರ್ನಾಟಕ ನಿರ್ಮಾಣ ದೃಷ್ಟಿಯಿಂದ ಬಜೆಟ್ ಮಂಡನೆಯಾಗಿದೆ ಚುನಾವಣೆಯ ದೃಷ್ಟಿಯನ್ನು ಇಟ್ಟುಕೊಂಡು ಬಜೆಟ್ ಮಂಡಿಸದೆ ಆರ್ಥಿಕ ದೃಷ್ಟಿಕೋನವಿಟ್ಟುಕೊಂಡು ಬಜೆಟ್ ಮಂಡಿಸಿದ್ದಾರೆ. ಬಳ್ಳಾರಿ ಜಿಲ್ಲೆಗೆ ಬಜೆಟ್ ನಲ್ಲಿ ಅನೇಕ ಯೋಜನೆಗಳನ್ನು ನೀಡಿದ್ದಾರೆ. ಕೃಷಿ, ಶಿಕ್ಷಣ, ಆರೋಗ್ಯ, ಸಾಂಸ್ಕೃತಿಕ, ಮಹಿಳೆಯರ ಸಬಲೀಕರಣ ಸೇರಿದಂತೆ ಎಲ್ಲಾ ವಲಯಕ್ಕೆ ಆದ್ಯತೆ ನೀಡಲಾಗಿದೆ. ಹಾಲು ಉತ್ಪಾದನೆ ಹೆಚ್ಚಿಸಲು ಮೆಗಾ ಡೇರಿ ಸ್ಥಾಪನೆಗೆ 100 ಕೋಟಿ ಅನುದಾನ ಒದಗಿದ್ದಾರೆ. ಸಿಗಡಿ ಕೃಷಿ ಕ್ಲಸ್ಟರ್ ಆರಂಭಕ್ಕೆ ಕ್ರಮಕೈಗೊಳ್ಳಲಾಗಿದೆ. ಹಂಪಿಯ ಅಭಿವೃದ್ಧಿಗೆ ಸಹ ಹೊತ್ತು ನೀಡಲಾಗಿದೆ. ಬಳ್ಳಾರಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆಗೆ ಕೆಎಂಆರ್ ಸಿ ಅನುದಾನದಲ್ಲಿ ನಿರ್ಮಿಸಲಾಗುವುದು ಎಂದರು.

ಇದನ್ನೂ ಓದಿ:ತಪ್ಪಿದ ಪಕ್ಷದ ಹೆಸರು-ಚಿಹ್ನೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಉದ್ಧವ್ ಠಾಕ್ರೆ ನಿರ್ಧಾರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.23ಕ್ಕೆ ಸಂಡೂರಿಗೆ ಆಗಮಿಸಲಿದ್ದಾರೆ. ಸಾರ್ವಜನಿಕ ಸಮಾವೇಶ ನಡೆಸಲಿದ್ದಾರೆ. ಸುಮಾರು ಒಂದು ಲಕ್ಷ ಜನ ಸೇರುವ ನಿರೀಕ್ಷೆಯಿದೆ. ತೋರಣಗಲ್ಲಿನಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ ಬಿಜೆಪಿ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next