Advertisement

ರಾಜ್ಯಕ್ಕೆ ಇಂದು ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ಮುರ್ಮು

06:37 PM Jul 09, 2022 | Team Udayavani |

ಬೆಂಗಳೂರು: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಭಾನುವಾರ ರಾಜ್ಯಕ್ಕೆ ಆಗಮಿಸಲಿದ್ದು, ಬಿಜೆಪಿ ಶಾಸಕರು-ಸಂಸದರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

Advertisement

ದ್ರೌಪದಿ ಮುರ್ಮು ಅವರಿಗೆ ಬಿಜೆಪಿ ಕರ್ನಾಟಕ ವತಿಯಿಂದ ಆತ್ಮೀಯ ಸ್ವಾಗತ ಕೋರಲು ಸಿದ್ಧತೆ ನಡೆಸಲಾಗಿದೆ. ದ್ರೌಪದಿ ಮುರ್ಮು ಅವರು ಆದಿವಾಸಿ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಕೋಲಾಟ ಸೇರಿದಂತೆ 20 ಆದಿವಾಸಿ ಕಲಾತಂಡಗಳಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನಿರ್ಧರಿಸಲಾಗಿದೆ.

ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ ಕುಮಾರ್‌ ಮಾರ್ಗದರ್ಶನದಲ್ಲಿ ಮುರ್ಮು ಸ್ವಾಗತಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮಹಿಳಾ ಮೋರ್ಚಾ ವತಿಯಿಂದ 2,500 ಮಹಿಳೆಯರು ಶಾಂಗ್ರಿ ಲಾ ಹೋಟೆಲ್‌ ಬಳಿ ಸೇರಿ ಅವರನ್ನು ಸ್ವಾಗತಿಸಲು ತೀರ್ಮಾನಿಸಲಾಗಿದೆ.

ಮುರ್ಮು ಆಗಮನ ಹಿನ್ನೆಲೆಯಲ್ಲಿ ಬಿಜೆಪಿಯ ಶಾಸಕರು-ಸಂಸದರ ಸಭೆ ನಿಗದಿಯಾಗಿದ್ದು ಮುರ್ಮು ಅವರು ಆ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next