Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿನ ಎನ್‍ಡಿಎ ಮತ್ತು ಇತರ ಸಮರ್ಥನೆ ಮಾಡಿದ ಪಕ್ಷಗಳ ಬಲವನ್ನು ಗಮನಿಸಿದರೆ ಶೇ 70ಕ್ಕೂ ಹೆಚ್ಚು ಮತಗಳು ಸಿಗುವ ನಿರೀಕ್ಷೆಯಿದೆ. ಸ್ವಾತಂತ್ರ್ಯದ ಬಳಿಕ ಮೊದಲ ಬಾರಿಗೆ ಒಬ್ಬ ಆದಿವಾಸಿ ಮಹಿಳೆಗೆ ರಾಷ್ಟ್ರಪತಿಯಾಗುವ ಅವಕಾಶ ಲಭಿಸುತ್ತದೆ ಎಂಬ ನಂಬಿಕೆ ನನಗಿದೆ ಎಂದರು.
Related Articles
Advertisement
ಬಿಜೆಪಿ ಸಾಮಾಜಿಕ ನ್ಯಾಯದ ಮೇಲೆ ನಂಬಿಕೆ ಇರುವ ಪಕ್ಷ. ನಮಗೆ ಮೊದಲನೇ ಬಾರಿ ರಾಷ್ಟ್ರಪತಿ ಆಯ್ಕೆ ಅವಕಾಶ ಸಿಕ್ಕಿದಾಗ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದಲ್ಲಿ ನಾವು ಗೌರವಾನ್ವಿತ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿ ಮಾಡಿದ್ದೆವು. ಅವರು ಜನರ ಹೃದಯವನ್ನು ಗೆದ್ದ ರಾಷ್ಟ್ರಪತಿಯಾದರು. ಎರಡನೇ ಬಾರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದಲಿತ ವರ್ಗದ ರಾಮನಾಥ ಕೋವಿಂದ್ ಅವರನ್ನು ರಾಷ್ಟ್ರಪತಿ ಮಾಡಿದ್ದೇವೆ. ಅವರು ಕಳಂಕರಹಿತ ಆಡಳಿತ ಕೊಟ್ಟಿದ್ದಾರೆ. ಮೂರನೇ ಬಾರಿ ಅವಕಾಶ ಲಭಿಸಿದಾಗ ಆದಿವಾಸಿ ಮಹಿಳೆಗೆ ಅವಕಾಶ ಕೊಟ್ಟು ಹೊಸ ದಾಖಲೆ ಬರೆದಿದ್ದೇವೆ ಎಂದು ತಿಳಿಸಿದರು.
ಸಾಮಾಜಿಕ ನ್ಯಾಯದ ಮುಖವಾಡ ಹಾಕಿದ ರಾಜಕೀಯ ಪಕ್ಷಗಳು ಆದಿವಾಸಿ ಮಹಿಳೆಯ ಉಮೇದ್ವಾರಿಕೆಯನ್ನು ವಿರೋಧಿಸುವ ಮೂಲಕ ಹಾಗೂ ಅವರನ್ನು ರಬ್ಬರ್ ಸ್ಟಾಂಪ್ ಎಂದು ಅಪಮಾನಿಸಿದ್ದು, ಅವರ ಮುಖವಾಡ ಕಳಚಿಬಿದ್ದಿದೆ ಎಂದರಲ್ಲದೆ, ಸಿದ್ದರಾಮಯ್ಯನವರೇ ನಿಮ್ಮ ಅಹಿಂದ ಟ್ರಂಪ್ ಕಾರ್ಡ್ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು. ನಾನು ಯಾವತ್ತೂ ದಲಿತರ ಪರ, ಹಿಂದುಳಿದವರ ಪರ, ಆದಿವಾಸಿಗಳ ಪರ, ಅಲ್ಪಸಂಖ್ಯಾತರ ಪರ ಎನ್ನುತ್ತಿದ್ದಿರಲ್ಲವೇ? ನಿಮಗೆ ಬದ್ಧತೆ ಇದ್ದರೆ ನೀವು ಆದಿವಾಸಿ ಮಹಿಳೆ ಮುರ್ಮು ಅವರ ಬೆಂಬಲಕ್ಕೆ ನಿಲ್ಲಬೇಕಾಗಿತ್ತು. ನಿಮಗೆ ಬದ್ಧತೆ ಇಲ್ಲ. ನಿಮ್ಮದು ಕೇವಲ ಮುಖವಾಡ ಮಾತ್ರ ಎಂದು ಆಕ್ಷೇಪಿಸಿದರು.