ಹರಿಯುತ್ತಿರುವುದರಿಂದ ಸ್ಥಳೀಯರು ಕೆಲ ದಿನಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ನಗರದ ಮಧ್ಯ ಭಾಗದಲ್ಲಿರುವ ಸೋಮವಾರ ಪೇಟೆಯಲ್ಲಿ ಮೂರು ದೇವಸ್ಥಾನಗಳ ನಡುವೆ ಒಳಚರಂಡಿ ಇದ್ದು, ಇದರ ಪೈಪ್‌ಲೈನ್ ಒಡೆದು ಹೋಗಿದ್ದರಿಂದ ಚರಂಡಿ ನೀರೆಲ್ಲ ರಸ್ತೆ ಮೇಲೆ ಹರಿಯುತ್ತಿದೆ. ಇಲ್ಲಿ ನಡೆದುಕೊಂಡು ಹೋಗುವುದು ಸ್ಥಳೀಯರಿಗೆ ಕಷ್ಟದ ಕೆಲಸವಾಗಿದೆ.
Advertisement
ಪೈಪ್‌ಲೈನ್ ಒಡೆದು ಗಜೀಲು ರಸ್ತೆಗೆ ಹರಿಯುತ್ತಿದ್ದು, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಮೂಗುಮುಚ್ಚಿಕೊಂಡು ಹೋಗುವಂತ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಮಹಾನಗರ ಪಾಲಿಕೆ ಆರೋಗ್ಯ ವಿಭಾಗಕ್ಕೆ ಮನವಿ ಸಲ್ಲಿಸಿದರೂ ಯಾರೂ ಇತ್ತ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.
ಓಡಾಡುತ್ತಿರುವುದರಿಂದ ದೇವಸ್ಥಾನದ ಗೋಡೆಗಳ ಮೇಲೂ ಈ ಗಲೀಜು ನೀರು ಸಿಡಿಯುತ್ತಿದೆ. ಕೂಡಲೇ ಕೂಡಲೇ ಮಹಾನಗರ
ಪಾಲಿಕೆ ಅ ಧಿಕಾರಿಗಳು ಇತ್ತ ಗಮನಹರಿಸಿ ಒಳಚರಂಡಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಸೋಮವಾರ ಪೇಟೆ ಸುತ್ತಲಿನ ಜನರಿಗೆ ಈ ಕಿರಿಕಿರಿ ಸಹಿಸಿಕೊಳ್ಳಲು ಆಗುತ್ತಿಲ್ಲ. ಇದರಿಂದ ನಿತ್ಯ ತೊಂದರೆ ಪಡುವಂತಾಗಿದೆ. ಮಕ್ಕಳು, ಮಹಿಳೆಯರು ಓಡಾಡುವುದೇ ಕಷ್ಟಕರವಾಗಿದೆ. ಪಾಲಿಕೆ ಅಧಿಕಾರಿಗಳಾಗಲೀ ಅಥವಾ ಜನಪ್ರತಿನಿಧಿಗಳಾಗಲೀ ಇತ್ತ ನಿರ್ಲಕ್ಷವಹಿಸಿದ್ದಾರೆ ಎಂದು ದೂರಿದರು.
Related Articles
Advertisement
ಬೆಳಗಾವಿಯನ್ನು ಸ್ಮಾರ್ಟ್ ಸಿಟಿಯನ್ನಾಗಿ ಮಾಡುತ್ತಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಇಂಥ ಗಲೀಜು ನೀರು ಕಾಣಿಸುವುದಿಲ್ಲ. ಎಲ್ಲಿ ನೋಡಿದರಲ್ಲಿ ಚರಂಡಿ ನೀರು ನಿಂತಿದ್ದರಿಂದ ಸೊಳ್ಳೆ, ಕೀಟಗಳ ಹಾವಳಿಯೂ ಹೆಚ್ಚಾಗಿದೆ. ಇದರು ಜನರ ಆರೋಗ್ಯಕ್ಕೆ ಹಾನಿಯನ್ನುಂಟು ಮಾಡುತ್ತಿದೆ ಎಂದು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಚರಂಡಿ ನೀರು ಸರಾಗವಾಗಿ ಹರಿಯುವಂತೆ ಮಾಡಲು ಪೈಪ್‌ಲೈನ್ ದುರಸ್ತಿ ಮಾಡಬೇಕು. ದೇವಸ್ಥಾನಕ್ಕೆ ಬರುವ ಭಕ್ತರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ರಸ್ತೆ ಮೇಲೆ ನೀರು ನಿಲ್ಲದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಒಳಚರಂಡಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.