Advertisement
ತಾಲೂಕಿನ ಚಪ್ಪರದಕಲ್ಲು ಸರ್ಕಲ್ ಬಳಿ ಯ ಜಿಲ್ಲಾ ಸಂಕೀರ್ಣದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Related Articles
Advertisement
ಸರ್ಕಾರದ ಅನುದಾನವಿಲ್ಲದೆಯೇ ಸಾರ್ವಜನಿಕ, ಖಾಸಗಿ ಸಹಭಾಗಿತ್ವದೊಂದಿಗೆ ನೂತನ ಕಾರ್ಯಕ್ರಮಗಳನ್ನು ಎಲ್ಲಾ ಇಲಾಖೆ ಅಧಿಕಾರಿಗಳು ಜಿಲ್ಲೆಯ ಅಭಿವೃ ದ್ಧಿಗೆ ಸಹಕಾರವಾಗುವಂತೆ ರೂಪಿಸಬೇಕು. ಅಲ್ಲದೇ 15 ದಿನಗಳೊಳಗಾಗಿ ಜಿಲ್ಲಾಧಿಕಾರಿ ಯವರಿಗೆ ಯೋಜನೆಯ ವರದಿ ನೀಡ ಬೇಕು. ಕ್ರಿಯಾ ಯೋಜನೆಯ ವರದಿ ಅರ್ಥಪೂರ್ಣವಾಗಿದ್ದು, ಜನರಿಗೆ ಅನುಕೂ ಲವಾಗುವಂತಿರಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಲಹೆ ನೀಡಿದರು.
ಬೋರ್‌ವೆಲ್ ದುರಸ್ತಿ ಮಾಡಿಸಿ: ಜಿಲ್ಲೆ ಯಲ್ಲಿನ ನೀರಿನ ಸಮಸ್ಯೆ ಕುರಿತು ಚರ್ಚಿಸಿದ ಪ್ರಧಾನ ಕಾರ್ಯದರ್ಶಿಗಳು, ತುರ್ತು ಅವಶ್ಯಕತೆ ಇರುವ ಕಡೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡ ಬೇಕೆಂದರು. ಬೊರ್‌ವೆಲ್‌ಗಳ ಸುತ್ತ ಇಂಗು ಗುಂಡಿ ನಿರ್ಮಾಣ, ಪೈಪ್‌ಲೈನ್, ಪಂಪು ಮೋಟಾ ರು ಅಳವಡಿಕೆ ಕಾಮಗಾರಿಗಳನ್ನು ಕೈಗೆತ್ತು ಕೊಳ್ಳಬೇಕು. ದುಸ್ಥಿತಿಯಲ್ಲಿರುವ ಬೋರ್ ವೆಲ್ ಮತ್ತು ಪಂಪು ಮೋಟಾರ್‌ಗಳನ್ನು ತುರ್ತಾಗಿ ಸರಿಪಡಿಸಬೇಕು ಎಂದು ಕಾರ್ಯಪಾಲಕ ಅಭಿಯಂತರರಿಗೆ ಅವರು ತಿಳಿಸಿದರು.
ಕೆರೆಗಳ ಪುನಃಶ್ಚೇತನ: ನರೇಗಾ ಯೋಜನೆ ಯಡಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಜಿಲ್ಲೆಯ ಕೆರೆಗಳ ಸಂರಕ್ಷಣೆಗಾಗಿ ಕೆರೆಗಳ ಪುನಃಶ್ಚೇತನ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೊಳ್ಳಬೇಕೆಂದು ತಿಳಿಸಿ ದರಲ್ಲದೇ ಶುದ್ಧ ನೀರು ಘಟಕಗಳ ನಿರ್ವ ಹಣೆ ಕಡೆಗೂ ಗಮನ ಹರಿಸಬೇಕೆಂದರು.
ಚುನಾವಣೆ ವರ್ಷವಾದ್ದರಿಂದ ಅಧಿಕಾರಿ ಗಳು ಚುನಾವಣಾ ಕಾರ್ಯದಲ್ಲಿ ಸಕ್ರಿಯ ರಾಗುವುದರೊಂದಿಗೆ ಕುಡಿಯುವ ನೀರು, ಮೇವು ಇನ್ನಿತರ ಅಗತ್ಯ ಸೌಲಭ್ಯಗಳನ್ನು ನೀಡುವಲ್ಲಿ ಸಮಸ್ಯೆ ಬಾರದಂತೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಕಾರ್ಯನಿರ್ವ ಹಿಸಬೇಕು. ಯಾವುದೇ ಸಮಸ್ಯೆ ಸಣ್ಣದಿರು ವಾಗಲೇ ಬಗೆಹರಿಸಬೇಕು. ಇಲ್ಲವಾದಲ್ಲಿ ಸಮಸ್ಯೆಗಳು ದೊಡ್ಡದಾಗಿ ಪರಿವರ್ತನೆ ಗೊಂಡು ಜಿಲ್ಲಾಡಳಿತಕ್ಕೆ ತೊಂದರೆಯಾದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಾಗುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾ ಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ನಿಗಮಗಳ ಪ್ರಗತಿ ಪರಿಶೀಲನೆ ನಡೆಸಿದರು.
ಈ ಸಭೆಯಲ್ಲಿ ಜಿಲ್ಲಾಧಿಕಾರಿ ಕರೀಗೌಡ, ಅಪಾರ ಜಿಲ್ಲಾಧಿಕಾರಿ ರಮ್ಯಾ, ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ವಿನೂತರಾಣಿ, ಉಪ ವಿಭಾಗಾಧಿಕಾರಿ ಮಂಜುನಾಥ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ತಹಶೀಲ್ದಾರರು ಮುಂತಾದವರು ಉಪ ಸ್ಥಿತರಿದ್ದರು.