Advertisement

ಕುಡಿವ ನೀರು: 142 ಹೊಸ ಕಾಮಗಾರಿ ಅನುಮೋದನೆ

12:44 PM Dec 16, 2019 | Team Udayavani |

ಬಾಗಲಕೋಟೆ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕುಡಿಯುವ ನೀರಿಗೆ ಸಂಬಂಧಿಸಿದ ಒಟ್ಟು 265 ಕಾಮಗಾರಿಗಳ ಪೈಕಿ 238 ಕಾಮಗಾರಿ ಪೂರ್ಣಗೊಳಿಸಲಾಗಿದೆ. ಹೊಸದಾಗಿ 142 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ತಿಳಿಸಿದರು.

Advertisement

ಜಿಪಂ ಅಧ್ಯಕ್ಷರ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ ಕುರಿತ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ಒಟ್ಟು 265 ಕಾಮಗಾರಿಗೆ 4708.47 ಲಕ್ಷಗಳ ಕ್ರಿಯಾ ಯೊಜನೆಯಡಿ ಅನುಮೋದನೆ ನೀಡಲಾಗಿತ್ತು. 265 ಪೈಕಿ 238 ಕಾಮಗಾರಿ ಪೂರ್ಣಗೊಳಿಸಿದ್ದು, ಬಾಕಿ ಇರುವ ಕಾಮಗಾರಿ ಸಹ ಪೂರ್ಣಗೊಳಿಸಲು ಸೂಚಿಸಿದರು. ಇನ್ನು 142 ಹೊಸ ಕಾಮಗಾರಿಗಳಿಗೆ 3081.64 ಲಕ್ಷ ರೂ.ಗಳ ಅನುದಾನದ ಕ್ರೀಯಾ ಯೋಜನೆಗೂ ಸಹ ಅನುಮೋದನೆ ನೀಡಿದ್ದು, ಕಾಮಗಾರಿಗಳು ವಿವಿಧ ಹಂತದಲ್ಲಿವೆ. ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಹಿಸಲು ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಸುಸ್ಥಿತಿಯಲ್ಲಿಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಅಧಿ ಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಪಂ ಯೋಜನಾ ನಿರ್ದೇಶಕ ವಿ.ಎಸ್‌. ಹಿರೇಮಠ ಸೇರಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next