Advertisement

ಕುಡಿವ ನೀರಿಗಾಗಿ ಮಹಾರಾಷ್ಟ್ರಕ್ಕೆ ಪತ್ರ: ಸಚಿವ ಎಂ.ಬಿ.ಪಾಟೀಲ

03:45 AM Mar 05, 2017 | Team Udayavani |

ವಿಜಯಪುರ: ಭೀಕರ ಬರದ ಹಿನ್ನೆಲೆ ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕುಡಿವ ನೀರಿನ ಅಭಾವ ಉಂಟಾಗಿದೆ. ಹೀಗಾಗಿ ಕೃಷ್ಣಾ ನದಿಗೆ 4 ಟಿಎಂಸಿ ಅಡಿ ನೀರು ಬಿಡುವಂತೆ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಬರುವ ಮೂರು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಪತ್ರ ಬರೆಯಲಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ತಿಳಿಸಿದರು. 

Advertisement

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೃಷ್ಣಾ ನದಿ ನೀರನ್ನೇ ಅವಲಂಬಿಸಿರುವ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ತೀರ ಪ್ರದೇಶದ ಹಳ್ಳಿಗಳಲ್ಲಿ ಕುಡಿಯುವ ನೀರಿನ ಅಭಾವ ಹೆಚ್ಚಿದೆ. ಈ ಹಿನ್ನೆಲೆ ದೂಧಗಂಗಾ, ಕಾಳಮ್ಮವಾಡಿ ಜಲಾಶಯಗಳಿಂದ 4 ಟಿಎಂಸಿ ಅಡಿ ನೀರು ಹರಿಸುವಂತೆ ಮನವಿ ಪತ್ರ ಬರೆಯಲಾಗುತ್ತದೆ ಎಂದರು.

ಮಹಾರಾಷ್ಟ್ರದಿಂದ ಈ ಹಿಂದೆ ನೀರನ್ನು ಹಣಕ್ಕೆ ಕೊಳ್ಳಲಾಗುತ್ತಿತ್ತು. ಆದರೆ ಕಳೆದ ವರ್ಷ ಕೃಷ್ಣಾ ನದಿಗೆ ಕೊಯ್ನಾ ಜಲಾಶಯದಿಂದ 2 ಟಿಎಂಸಿ ಅಡಿ ನೀರು ಕರ್ನಾಟಕಕ್ಕೆ ಹರಿಸಬೇಕು. ಕರ್ನಾಟಕ ಭೀಮಾ ನದಿ ಮೂಲಕ ಸೊಲ್ಲಾಪುರ ನಗರ ಹಾಗೂ ಗ್ರಾಮೀಣ ಪ್ರದೇಶಕ್ಕೆ ಬಸವಸಾಗರ ಜಲಾಶಯದಿಂದ ನೀರು ಬಿಡಬೇಕು ಎಂದು ಒಪ್ಪಂದ ಮಾಡಿಕೊಂಡಿದ್ದೆವು ಎಂದು ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next