ಬೆಳಗಾವಿ: ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಬೆಳಗಾವಿ, ಕಲಬುರ್ಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಲಿರುವುದರಿಂದ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸಲು ಅನುಕೂಲವಾಗುವಂತೆ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ಒಟ್ಟಾರೆ ಐದು ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ.
ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಈ ಕುರಿತು ಬುಧವಾರ ಪತ್ರವನ್ನು ಬರೆಯಲಾಗಿದೆ.
ಕುಡಿಯುವ ನೀರಿನ ಅಭಾವದ ಹಿನ್ನೆಲೆಯಲ್ಲಿ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ತಲಾ ಮೂರು ಟಿ.ಎಂ.ಸಿ. ನೀರು ಬಿಡುಗಡೆ ಮಾಡುವಂತೆ ಈ ಮೊದಲು ಪತ್ರ ಬರೆಯಲಾಗಿತ್ತು.
ಅದಕ್ಕೆ ಸ್ಪಂದಿಸಿ ಮೇ ತಿಂಗಳ ಮೊದಲ ಪಾಕ್ಷಿಕ ಅವಧಿಯಲ್ಲಿ ಕೃಷ್ಣಾ ನದಿಗೆ ಒಂದು ಟಿಎಂಸಿ ನೀರು ಬಿಡುಗಡೆ ಮಾಡಿರುವ ಮಹಾರಾಷ್ಟ್ರ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿರುವ ಮುಖ್ಯಮಂತ್ರಿಗಳು, ಉತ್ತರ ಕರ್ನಾಟಕ ಭಾಗದಲ್ಲಿ ಬೇಸಿಗೆ ತೀವ್ರವಾಗಿರುವುದರಿಂದ ಇನ್ನೂ ಐದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕೋರಿದ್ದಾರೆ.
ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ತಪ್ಪಿಸಲು ಮಹಾರಾಷ್ಟ್ರ ರಾಜ್ಯದ ವಾರಣಾ/ಕೊಯ್ನಾ ಜಲಾಶಯಗಳಿಂದ 2 ಟಿಎಂಸಿ ಹೆಚ್ಚುವರಿಯಾಗಿ ಕೃಷ್ಣಾ ನದಿಗೆ ಬಿಡುಗಡೆಗೊಳಿಸಬೇಕು.
Related Articles
ಅದೇ ರೀತಿ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ 3 ಟಿಎಂಸಿ ನೀರು ಬಿಡುಗಡೆ ಮಾಡಲು ಕೂಡಲೇ ಸೂಚನೆ ನೀಡಬೇಕು ಎಂದು ಅವರು ಪತ್ರದಲ್ಲಿ ವಿನಂತಿಸಿದ್ದಾರೆ.
ಇದನ್ನೂ ಓದಿ: Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ