Advertisement

“ಕುಡಿಯುವ ನೀರಿನ ಸಮಸ್ಯೆ; ಮುನ್ನೆಚ್ಚರಿಕೆ ಅಗತ್ಯ’

01:03 AM Feb 27, 2020 | Sriram |

ಉಡುಪಿ: ಜಿಲ್ಲೆಯಲ್ಲಿ ಬೇಸಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್‌ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ಬಾರಿ ಬೇಸಗೆಯಲ್ಲಿ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ತಲೆದೋರಿದ ನೀರಿನ ಸಮಸ್ಯೆ ಕುರಿತು ಪ್ರಸ್ತಾವಿಸಿದ ಅವರು ಈ ಬಾರಿ ಮೇ ಅಂತ್ಯದವರೆಗೂ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಉಡುಪಿ ನಗರಸಭೆಯ ಪೌರಾಯುಕ್ತರಿಗೆ ಸೂಚಿಸಿದರು. ನೀರಿನ ಸಂಪರ್ಕ ಕಡಿತಗೊಳಿಸುವ ನಿರ್ಣಯ ಕೈಗೊಳ್ಳುವ ಮೊದಲು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ, ಸಾರ್ವಜನಿಕರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಹಾಗೂ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯತತ್ಪರರಾಗಿ ಎಂದರು.

ಕುಡಿಯುವ ನೀರಿನ ಸಮಸ್ಯೆಗಳಿಗೆ ಸ್ಪಂದಿಸಲು ಕಾಲ್‌ ಸೆಂಟರ್‌ ತೆರೆಯುವಂತೆ ತಿಳಿಸಿದ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್‌, ನದಿ ದಂಡೆಯಲ್ಲಿನ ರೈತರಿಗೆ ನದಿಯ ನೀರು ಬಳಸುವುದರ ಬದಲು ಹನಿ ನೀರಾವರಿ ಪದ್ಧªತಿ ಅಳವಡಿಸಿಕೊಳ್ಳುವ ಕುರಿತಂತೆ, ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳ ಅಧಿಕಾರಿಗಳು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ರೈತರ ಸಭೆ ನಡೆಸಲು ತಿಳಿಸಿದರು.

ಜಿಲ್ಲಾಸ್ಪತ್ರೆಯಲ್ಲಿ ಡಯಾಲಿಸಿಸ್‌ಗೆ
ಹೆಚ್ಚಿನ ಬೇಡಿಕೆ ಇದ್ದು, ಪ್ರಸ್ತುತ 90 ಮಂದಿ ಡಯಾಲಿಸಿಸ್‌ಗೆ ಒಳಪಡುತ್ತಿದ್ದು, 50 ಮಂದಿ ಕಾಯುವಿಕೆ ಪಟ್ಟಿಯಲ್ಲಿ ಇದ್ದಾರೆ ಎಂಬುದನ್ನು ಪರಿಶೀಲಿಸಿದ ಮಹೇಶ್ವರ ರಾವ್‌, ಜಿಲ್ಲೆಯಲ್ಲಿನ ಖಾಸಗಿ ಸಂಸ್ಥೆಗಳು ತಮ್ಮ ಸಿಎಸ್‌ಆರ್‌ ನಿಧಿಯಿಂದ ಡಯಾಲಿಸಿಸ್‌ ಯಂತ್ರ ನೀಡಲು ಆಸಕ್ತಿ ಇರುವ ಬಗ್ಗೆ ಪರಿಶೀಲಿಸಿ, ಕಾರ್ಕಳದ ನೂತನ ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಯಂತ್ರ ಅಳವಡಿಸುವಂತೆ ಜಿಲ್ಲಾ ಸರ್ಜನ್‌ಗೆ ಸೂಚಿಸಿದರು. ಜಿಲ್ಲೆಯಲ್ಲಿನ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಪಡುಕೆರೆ ಬೀಚ್‌ನಲ್ಲಿ ಲೈಟ್‌ ಅಳವಡಿಕೆ ಮತ್ತು ಕಾಪು ಲೈಟ್‌ ಹೌಸ್‌ ಬಳಿ ಅಗತ್ಯ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಲು ಸೂಚಿಸಿದರು ಮತ್ತು ಜಿಲ್ಲೆಯಲ್ಲಿ ಮರಳು ಸಾಗಾಟ ಸಂದರ್ಭದಲ್ಲಿ ನಿಯಮ ಉಲ್ಲಂಘನೆಯಾಗಿರುವ ಪ್ರಕರಣಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡುವಂತೆ ಸೂಚಿಸಿದರು.
ಸಭೆಯಲ್ಲಿ ಜಿ.ಪಂ. ಸಿಇಒ ಪ್ರೀತಿ ಗೆಹೊÉàತ್‌ ಎಸ್ಪಿ ವಿಷ್ಣುವರ್ಧನ್‌, ಕುಂದಾ ಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್‌ ರೆಡ್ಡಿ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

ನೀರು ವಿತರಣೆಗೆ ಆ್ಯಪ್‌
ಬೇಸಗೆ ಸಮಯದಲ್ಲಿ ಜಿಲ್ಲೆಯ ಗ್ರಾಮಾಂ ತರ ಪ್ರದೇಶದಲ್ಲಿ ಟ್ಯಾಂಕರ್‌ಮೂಲಕ ನೀರು ವಿತರಿಸುವ ಕುರಿತಂತೆ ಆ್ಯಪ್‌ ಅಭಿವೃದ್ಧಿಪಡಿಸಲಾಗಿದ್ದು, ಇದರ ಪ್ರಾಯೋಗಿಕ ಬಳಕೆಯ ಕುರಿತು ಎಲ್ಲ ತಹಶೀಲ್ದಾರ್‌ಗಳಿಗೆ ತರಬೇತಿಯನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಮಾಹಿತಿ ನೀಡಿದರು.

ನೀರು ನಿಲ್ಲದಂತೆ ಮುನ್ನೆಚ್ಚರಿಕೆ ಅಗತ್ಯ
ಜಿಲ್ಲೆಯಲ್ಲಿ ಮಲೇರಿಯ ಮುಂತಾದ ರೋಗ ಹರಡುವಿಕೆಯನ್ನು ನಿಯಂತ್ರಿಸಲು ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕಟ್ಟಡ ನಿರ್ಮಾಣ ಸ್ಥಳದಲ್ಲಿ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸದ ಕಟ್ಟಡ ಮಾಲಕ‌ರಿಗೆ ಹೆಚ್ಚಿನ ಪ್ರಮಾಣದ ದಂಡ ವಿಧಿಸಬೇಕು ಹಾಗೂ ಈ ಬಗ್ಗೆ ನಗರಸಭೆಯ ಬೈಲಾದಲ್ಲಿ ಅಳವಡಿಸಿ, ನಗರ ಸಭೆಯ ಅಧಿಕಾರಿಗಳ ತಂಡ ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸಬೇಕು. ಜಿಲ್ಲೆಯಲ್ಲಿ ಎಳನೀರು ಸಿಪ್ಪೆಯನ್ನು ಬಿಸಾಡುವ ಬದಲು ಅದರ ಮೌಲ್ಯವರ್ಧನೆ‌ ಮಾಡುವ ಕುರಿತಂತೆ ತೋಟಗಾರಿಕಾ ಅಧಿಕಾರಿಗಳು ಮತ್ತು ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಪರಿಶೀಲಿಸಬೇಕು ಹಾಗೂ ಮೌಲ್ಯವರ್ಧನೆ ಮಾಡಲು ಮುಂದೆ ಬರುವ ಕೈಗಾರಿಕೋದ್ಯಮಿಗಳಿಗೆ ಅಗತ್ಯ ಸಹಾಯಧನ ಮತ್ತು ಕೈಗಾರಿಕೆ ಸ್ಥಾಪನೆಗೆ ಸ್ಥಳವನ್ನು ನೀಡಬೇಕು.
-ಎಂ. ಮಹೇಶ್ವರ ರಾವ್‌, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

Advertisement

Udayavani is now on Telegram. Click here to join our channel and stay updated with the latest news.

Next