Advertisement
ಹಲವು ಜಿಲ್ಲೆಗಳಲ್ಲಿ ಕೆರೆಕಟ್ಟೆಗಳು ಒಣಗಿವೆ, ಅಂತರ್ಜಲ ದಿನದಿಂದ ದಿನಕ್ಕೆ ಇಳಿಯುತ್ತಿದೆ, ಕುಡಿಯುವ ನೀರಿನ ಆಸರೆ ಬತ್ತುತ್ತಿದೆ. ಸರಕಾರದ ಸೂಚನೆಯಂತೆ ಜಿಲ್ಲಾಡಳಿತಗಳು ಮುಂಜಾಗ್ರತೆ ಕ್ರಮಕ್ಕೆ ಮುಂದಾಗಿರುವುದು ಕಂಡುಬಂದಿದೆ.
ವಿಶೇಷವಾಗಿ ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲವು ತಾಲೂಕುಗಳಲ್ಲೂ ಕುಡಿ ಯುವ ನೀರಿನ ಸಮಸ್ಯೆ ಗಂಭೀರ ವಾಗಿದೆ. ಉಡುಪಿಯಲ್ಲಿ ಅಂತರ್ಜಲ ಶೇ. 6ರಷ್ಟು ಕುಸಿದ ಬಗ್ಗೆ ವರದಿಯಾಗಿದೆ. ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕದ ಹಲವು ನಗರಗಳಲ್ಲಿ, ಈಗಾಗಲೇ 15 ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. ಬೆಂಗಳೂರಿನಲ್ಲಿ ಮಾರ್ಚ್‌ನಲ್ಲಿ ನೀರಿಗೆ ಹಾಹಾಕಾರ ಎದುರಾಗುವ ಬಗ್ಗೆ ಜಲಮಂಡಳಿ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಅಂತರ್ಜಲ ಮಟ್ಟ ತೀವ್ರ ಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರನ್ನೇ ಆಶ್ರಯಿಸುವವರ ಪ್ರಮಾಣ ಹೆಚ್ಚಾಗಿದೆ.